ದಾವಣಗೆರೆ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾ ೯ ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತನ್ನು ಮಾ ೧೬ ಕ್ಕೆ ಮುಂದೂಡಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ ತಿಳಿಸಿದ್ದಾರೆ.