Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್
ತಾಜಾ ಸುದ್ದಿ

ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್

Dinamaana Kannada News
Last updated: November 20, 2024 1:32 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ನ.20(Davanagere): ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸಾಧಕ, ಬಾದಕಗಳ ಪರಿಶೀಲನೆ ನಂತರ ಹೊರಗುತ್ತಿಗೆಯ ಎಲ್ಲಾ ಗ್ರೂಪ್ ಡಿ ಸಿಬ್ಬಂದಿಗಳನ್ನು ನೇರಪಾವತಿಯಡಿ ಪಡೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಮಾಡಿರುವ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್‍ನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು.

ದಾವಣಗೆರೆಯಲ್ಲಿನ ಚಿಗಟೇರಿ ಆಸ್ಪತ್ರೆ ವಿಶಾಲವಾದ ಸ್ಥಳದಲ್ಲಿದ್ದು 70 ವರ್ಷದ ಹಳೆಯದಾಗಿದೆ. ಇಲ್ಲಿ ಹೊಸ ಕಟ್ಟಡ, ದುರಸ್ಥಿಯಾಗಬೇಕಾಗಿದ್ದು ಮಧ್ಯ ಕರ್ನಾಟಕದಲ್ಲಿನ ಈ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವ ಮೂಲಕ ಈ ಭಾಗದಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಇಲ್ಲಿನ ಮೂಲಭೂತ ಸೌಕರ್ಯಕ್ಕೆ ಮತ್ತು ಹೊಸ ಬ್ಲಾಕ್ ನಿರ್ಮಾಣಕ್ಕೆ ರೂ.17 ಕೋಟಿ ಬಿಡುಗಡೆ ಮಾಡಲಾಗಿದ್ದು ಭವಿಷ್ಯದ ದೃಷ್ಟಿಯಿಂದ ನೂತನ ಯೋಜನೆಯನ್ನು ಸಿದ್ದಪಡಿಸಿ ಅದರಂತೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು.

ರೂ. 30 ಕೋಟಿಯಲ್ಲಿ ನಿರ್ಮಿಸಲಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 200 ಹಾಸಿಗೆ ಸಾಮಥ್ರ್ಯವಿದ್ದು ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ಮಂಜೂರು ಮಾಡಲು ಸರ್ಕಾರದ ಮುಂದೆ ಪ್ರಸ್ತಾವನೆ ಇದ್ದು ಇಲ್ಲಿಗೆ ಬೇಕಾಗಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳಿಗೆ ಮಂಜೂರಾತಿಯನ್ನು ನೀಡಲಾಗುತ್ತದೆ. ಟ್ರಾಮಾ ಕೇರ್ ಸೆಂಟರ್‍ಗೂ ಸಿಬ್ಬಂದಿಗಳ ಅಗತ್ಯವಿದ್ದು ಪರಿಶೀಲಿಸಿ ಮಂಜೂರಾತಿ ನೀಡಲಾಗುತ್ತದೆ. ಆಸ್ಪತ್ರೆ ಕಟ್ಟಿದರೆ ಸಾಲದು, ಇಲ್ಲಿ ಅಗತ್ಯವಿರುವ ಪರಿಕರ, ಸಿಬ್ಬಂದಿಗಳು ಇದ್ದಾಗ ಮಾತ್ರ ಜನರಿಗೆ ಆರೋಗ್ಯ ಸೇವೆ ಸಿಗಲು ಸಾಧ್ಯವಿದೆ ಎಂದರು.

ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಆದರೆ ಇವುಗಳಿಗೆ ಸಿಗಬೇಕಾದ ಆದ್ಯತೆ ಸಾಕಾಗುತ್ತಿಲ್ಲ. ಜನರ ಆರೋಗ್ಯ ಸಂರಕ್ಷಣೆ ಮಾಡಿದಾಗ ಆರೋಗ್ಯವಂತ ನಾಗರಿಕನಾಗಲು ಸಾಧ್ಯ, ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗಾಗಿ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಆರೋಗ್ಯವು ಗ್ಯಾರಂಟಿ ಯೋಜನೆಯಾಗಬೇಕು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕಾಗಿದೆ ಎಂದರು.

ಮಾಯಕೊಂಡ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿದ್ದರೂ ಸಮುದಾಯ ಆರೋಗ್ಯ ಕೇಂದ್ರವಿರುವುದಿಲ್ಲ. ಮುಂದಿನ ದಿನಗಳಲ್ಲಿ ಮಾಯಕೊಂಡಕ್ಕೆ ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗುತ್ತದೆ. ಮೂಲಭೂತ ಸೌಕರ್ಯ ಕೊಟ್ಟರೆ ಸಾಕಾಗುವುದಿಲ್ಲ, ವೈದ್ಯರು ಜನರ ಸೇವೆ ಮಾಡಬೇಕು. ವೈದ್ಯಕೀಯ ಸೇವಾ ಕ್ಷೇತ್ರವಾಗಿದ್ದು ಸಹಾನುಭೂತಿಯಿಂದ ಎಲ್ಲಾ ವೈದ್ಯರು ಕೆಲಸ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ವೈದ್ಯರು, ಸಿಬ್ಬಂದಿಗಳ ಸೇವೆ ಜನರಿಗೆ ಸಿಗುವಂತಾಗಬೇಕೆಂದರು.

ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಸ್ಪತ್ರೆ ಕಟ್ಟಡದ ಜೊತೆಗೆ ಸಲಕರಣೆಗಳು ಇರಬೇಕಾಗುತ್ತದೆ, ಜೊತೆಗೆ ಸಿಬ್ಬಂದಿಗಳು ಇರಬೇಕು, ಇಲ್ಲವಾದಲ್ಲಿ ವ್ಯರ್ಥವಾಗುತ್ತದೆ. ಚಿಗಟೇರಿ ಆಸ್ಪತ್ರೆಯಿಂದ ಸಾಕಷ್ಟು ಬಡ ಜನರಿಗೆ ಅನುಕೂಲವಾಗಿದೆ. ಇಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳು ಜನರಿಗೆ ಸಿಗುವಂತಾಗಬೇಕು. ಇಲ್ಲಿ ನರ್ಸ್, ಆಯಾಗಳ ಕೊರತೆ ಇದೆ ಎಂದು ತಿಳಿದುಬಂದಿದ್ದು ವ್ಯವಸ್ಥೆ ಸರಿಪಡಿಸಬೇಕು. ಹೊರಗುತ್ತಿಗೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರಪವಾತಿಯಡಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳನ್ನು ಪಡೆಯುವಂತಾಗಬೇಕು. ಸಾರ್ವಜನಿಕ ಸೇವೆ ಮಾಡುವಾಗ ಬಹಳ ಪಾರದರ್ಶಕವಾಗಿ ಕೆಲಸ ಮಾಡಬೇಕಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಖಾಸಗಿಯಾಗಿ 8 ಕೋಟಿವರೆಗೆ ವೆಚ್ಚ ಮಾಡಲಾಗಿದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್  ಮಾತನಾಡಿ, ವಿದ್ಯಾರ್ಥಿಯಾಗಿದ್ದ ಸಮಯದಿಂದಲೂ ಚಿಗಟೇರಿ ಆಸ್ಪತ್ರೆಯ ಸ್ಥಿತಿಗತಿ ಗೊತ್ತಿದೆ. ಇಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಜೊತೆಗೆ ಸುಧಾರಣೆಯಾಗಬೇಕಿದೆ. ಮಾಸ್ಟರ್ ಪ್ಲಾನ್ ತಯಾರಿಸುವ ಮೂಲಕ ಹಂತ ಹಂತವಾಗಿ ಸುಧಾರಣಾ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಮಾನವ ಹಾಲು ಬ್ಯಾಂಕ್ ಸ್ಥಾಪನೆ ಮಾಡುವ ಮೂಲಕ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿದೆ, ಇದಕ್ಕೆ ಮಾನವ ಸಂಪನ್ಮೂಲ ಕಲ್ಪಿಸಬೇಕು. ಸಿಬ್ಬಂದಿಗಳು ಸಹ ಉಪಕರಣಗಳನ್ನು ನಿಷ್ಕ್ರಿಯೆಗೊಳಿಸದೇ ಉಪಯುಕ್ತ ಮಾಡಿಕೊಳ್ಳಬೇಕು. ಐಸಿಯು ಬೆಡ್ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಬೇಕು. ಶವಗಾರಕ್ಕೆ ಕಾಯಕಲ್ಪ ಮಾಡಬೇಕಾಗಿದ್ದು ಅತ್ಯುತ್ತಮವಾಗಿ ಕೆಲಸ ಮಾಡುವ ಡಾ; ಮೋಹನ್ ರವರನ್ನು ಸನ್ಮಾನಿಸಿ ಗೌರವಿಸಬೇಕೆಂದರು.

ಮೇಯರ್ ಕೆ.ಚಮನ್‍ಸಾಬ್, ದೂಡಾ ಆಧ್ಯಕ್ಷ ಕೆ.ದಿನೇಶ್ ಶೆಟ್ಟಿ, ಉಪ ಮೇಯರ್ ಸೋಗಿ ಶಾಂತಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್ ಕೆ.ಬಿ, ಅಭಿಯಾನ ನಿರ್ದೇಶಕರಾದ ಡಾ; ನವೀನ್ ಭಟ್ ರೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Read also : ಯೋಗ ಗುರು ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಯೋಗ ಗುರು ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ
Next Article DAVANAGERE ಭದ್ರಾ ನಾಲೆಗಳಿಗೆ ನೀರು ಸ್ಥಗಿತ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಇತಿಹಾಸ ಮರೆಯದ ಕೌತುಕದ ಕ್ಷಣಗಳು..

ಅವತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ತಮ್ಮ ಪುತ್ರ ಸಂಜಯ್ ಗಾಂಧಿ ಅವರೊಂದಿಗೆ ಕರ್ನಾಟಕಕ್ಕೆ ಬಂದರು. ರಾಜಕೀಯವಾಗಿ ಬಸವಳಿದಿದ್ದ ಅವರಿಗೆ ತುರ್ತು…

By Dinamaana Kannada News

Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು

ನ್ಯಾಮತಿ (Nyamati) : ತಾಲೂಕಿನಾಧ್ಯಂತ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆ ತಾಲೂಕಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ , ಸತತ…

By Dinamaana Kannada News

ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.21 (Davanagere); ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‌ನಡಿಯಲ್ಲಿ 80% ಮನೆಗಳಿಗೆ ನಳದ ಮೂಲಕ ನೀರಿನ ಸಂಪರ್ಕವಿದೆ ಎಂದು ಹೇಳುತ್ತದೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?