ದಾವಣಗೆರೆ :
ಚಾಲಕನ ಅಜಾಗರೂಕತೆಯಿಂದ ಬೈಕ್ ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಬಾತಿ ಗ್ರಾಮದ ರಾಕೇಶ್ (22), ಆಕಾಶ್ (23 ) ಮೃತಪಟ್ಟ ಬೈಕ್ ಸವಾರರು.
ಮೃತದೇಹವನ್ನು ಹರಿಹರ ತಾಲ್ಲೂಕು ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.