ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ಕೊಡ ಮಾಡುವ ಕೆಯುಡಬ್ಲ್ಯೂಯುಜೆ ದತ್ತಿನಿಧಿ ಪ್ರಶಸ್ತಿಗಳನ್ನು ಗುರುವಾರ ಘೋಷಣೆ ಮಾಡಿದ್ದು, ದಾವಣಗೆರೆ ಕನ್ನಡಿಗ ಪ್ರಾದೇಶಿಕ ಪತ್ರಿಕೆ ಸಂಪಾದಕ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಆರ್.ರವಿ ಅವರಿಗೆ ‘ಎಂ.ನಾಗೇಂದ್ರರಾವ್ ಪ್ರಶಸ್ತಿ’ ಲಭಿಸಿದೆ.
ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ದತ್ತಿನಿಧಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಈ ಬಾರಿ ಎಂ.ನಾಗೇಂದ್ರರಾವ್ ಪ್ರಶಸ್ತಿ ಆರ್.ರವಿ ಅವರಿಗೆ ಕೊಡ ಮಾಡಲಾಗುತ್ತಿದೆ.
ಚಿತ್ರದುರ್ಗದಲ್ಲಿ ಏ.೧ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಎಂ.ನಾಗೇಂದ್ರರಾವ್ ಪ್ರಶಸ್ತಿಗೆ ಆಯ್ಕೆಯಾಗಿರುವ ಆರ್.ರವಿ ಅವರಿಗೆ ಕರ್ನಾಟಕ ಕಾರ್ಯನಿರತ ಪ್ರತಕರ್ತರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಪಾಧಿಕಾರಿಗಳು ಹಾಗೂ ದಾವಣಗೆರೆ ಕನ್ನಡಿಗ ಪ್ರಾದೇಶಿಕ ದಿನಪತ್ರಿಕೆಯ ಬಳಗ, ಸ್ನೇಹಿತರು, ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.