Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ
ತಾಜಾ ಸುದ್ದಿ

ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ

Dinamaana Kannada News
Last updated: December 15, 2024 3:20 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere):  ಸುಪ್ರೀಂಕೋರ್ಟ್ ನ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಲು ಡಿ. 16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ನೀಡಲಾಗಿದೆ ಎಂದು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಆಲೂರು ನಿಂಗರಾಜ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಒಳ ಮೀಸಲಾತಿ – ಪರಿಶಿಷ್ಟ ಜಾತಿಗಳ ನೂರೊಂದು ಸಮುದಾಯಗಳಿಗೂ ಸಾಮಾಜಿಕ ನ್ಯಾಯವನ್ನು ಕೊಡುತ್ತದೆ. ಈ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ತೀರ್ಪನ್ನು ಕೊಟ್ಟಿದೆ. ಇಂತಹದೊಂದು ಐತಿಹಾಸಿಕ ತೀರ್ಪು ಬರುವಲ್ಲಿ ಬಿಜೆಪಿ ಮತ್ತು ಸಂಘಪರಿವಾರದ ಪಾತ್ರ ಮಹತ್ವದ್ದಾಗಿದೆ. ಕರ್ನಾಟಕದ ಬಸವರಾಜ್ ಬೊಮ್ಮಾಯಿ ಸರ್ಕಾರ ಒಳ ಮೀಸಲಾತಿ ಶಿಫಾರಸ್ಸು ಮಾಡುವ ನಿರ್ಧಾರ ಮಾಡಿತು. ಸ್ವತಃ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿಯವರೆ ಒಳ ಮೀಸಲಾತಿಯನ್ನು ಬೆಂಬಲಿಸಿದ್ದಾರೆ ಎಂದರು.

ಆಗಸ್ಟ್ 1 ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕದ ಸರ್ಕಾರ ಅಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ, 2 ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ. ಆಯೋಗಕ್ಕೆ ಬೇಕಾದ ಕಛೇರಿ, ಸಿಬ್ಬಂದಿ. ಹಣಕಾಸಿನ ನೆರವು ಕೊಡದೆ ಕಾಲಾಹರಣ ನಡೆಸಲಾಗುತ್ತಿದೆ ಎಂದು ದೂರಿದರು.

ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ. ಸರಕಾರದ ಮುಂದೆ ನ್ಯಾ ಸದಾಶಿವ ಆಯೋಗ, ಮಾಧುಸ್ವಾಮಿ ಸಮಿತಿ ವರದಿ ಇದೆ. ಮಾಧುಸ್ವಾಮಿ ಯವರ ಸಮಿತಿ ಎಕೆ (ಆದಿ ಕರ್ನಾಟಕ), ಎಡಿ (ಆದಿ ದ್ರಾವಿಡ) ಸಮಸ್ಯೆಗೆ ಪರಿಹಾರ ಒದಗಿಸಿದೆ. 2011ರ ಜನಗಣತಿಯ ಅಂಕಿ- ಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಿದೆ. ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ಒಳಮೀಸಲಾತಿ ಜಾರಿ ಆಗುವ ವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ, ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೆ ಇದೆ. ಇದು ಖಂಡನಾರ್ಹ, ಸರ್ಕಾರದ ಈ ಒಳಮೀಸಲಾತಿ ವಿರೋಧಿ ಧೋರಣೆ ಖಂಡಿಸಿ ಇದೇ ಡಿಸೆಂಬರ್ 16 ರಂದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ನೀಡಲಾಗಿದೆ ಎಂದರು.

ಜಿಲ್ಲೆಯ ಶಾಸಕರಾಗಿ ಆಯ್ಕೆ ಆಗುವಲ್ಲಿ ನಮ್ಮ ಸಮಾಜದ ಬೆಂಬಲ ನಿರ್ಣಾಯಕವಾಗಿದೆ. ನೀವು ಬೆಳಗಾವಿ ಅಧಿವೇಶನದಲ್ಲಿ ಒಳ ಮೀಸಲಾತಿಯ ವಿಷಯವನ್ನು ಪ್ರಸ್ತಾಪಿಸಬೇಕು. ಹಾಗೂ ಬೆಂಬಲ ಸೂಚಿಸಬೇಕೆಂದು ನಮ್ಮ ವಿನಂತಿ. ಹಾಗೆಯೇ ಬೆಳಗಾವಿಯ ಹಕ್ಕೊತ್ತಾಯ ಸಮಾವೇಶದಲ್ಲಿ ಪ್ರತಿನಿಧಿಗಳು ಬರಬೇಕು. ನಮ್ಮ ವಿಧಾನ ಸಭಾ ಕ್ಷೇತ್ರದಿಂದ ದೊಡ್ಡ ಸಂಖ್ಯೆಯಲ್ಲಿ ಬೆಳಗಾವಿಗೆ ಹೋಗಲು ನಿಮ್ಮ ಸಹಕಾರ ಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ, ಅಂಜಿನಪ್ಪ ಎಂ. ಶಾಮನೂರು, ಹರೀಶ್ ಹೊನ್ನೂರು, ಬಿ. ಹಾಲೇಶ್, ಕೆ.ಹೆಚ್. ಅವಿನಾಶ್ ಇನ್ನಿತರರು ಉಪಸ್ಥಿತರಿದ್ದರು.

Read also : Davanagere | ಒಳಮೀಸಲಾತಿ ವಿಷಯ ಸದನದಲ್ಲಿ ಪ್ರಸ್ತಾಪಿಸಿ : ಡಿಎಸ್‍ಎಸ್ ಒತ್ತಾಯ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಒಳಮೀಸಲಾತಿ ವಿಷಯ ಸದನದಲ್ಲಿ ಪ್ರಸ್ತಾಪಿಸಿ : ಡಿಎಸ್‍ಎಸ್ ಒತ್ತಾಯ
Next Article DAVANAGERE ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ…

By Dinamaana Kannada News

Crime news | ಬೈಕ್‌ ಕೊಡಿಸದಿದ್ದಕ್ಕೆ ಯುವಕ ಆತ್ಮಹತ್ಯೆ

ದಾವಣಗೆರೆ (Davanagere):  ಬೈಕ್ ಕೊಡಿಸದಿದ್ದಕ್ಕೆ  ಬೇಸತ್ತು ಪ್ರಥಮ ಪಿಯುಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ. ನ್ಯಾಮತಿ…

By Dinamaana Kannada News

ನಗರದ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯ : ಸಿಎಂಗೆ ಮನವಿ

ದಾವಣಗೆರೆ(Davanagere): ನಗರದ ಯಾವುದಾದರೂ ಪ್ರಮುಖ ಸರ್ಕಲ್ ಗೆ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?