ದಾವಣಗೆರೆ (Davanagere): ಪಾಲಿಕೆಯಲ್ಲಿ ಜನರ ಕೆಲಸ ಮಾಡಿಕೊಡಲು ಅಧಿಕಾರಿಗಳು ವಿಳಂಬಧೋರಣೆ ಅನುಸರಿಸುತ್ತಿದ್ದು ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಬಳಿ ಸಾರ್ವಜನಿಕರು ದೂರು ಸಲ್ಲಿಸಿದರು.
ನೂತನ ಮೇಯರ್ ಕೆ.ಚಮನ್ ಸಾಬ್ ಅವರ ಕಚೇರಿ ಉದ್ಘಾಟನೆಗೆ ತೆರಳಿದ್ದ ಸಂದರ್ಭದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ಸಾರ್ವಜನಿಕರು ತಮ್ಮ ಸಮಸ್ಯೆ ತೋಡಿಕೊಂಡರು, ತಕ್ಷಣವೇ ಸ್ಪಂದಿಸಿದ ಸಂಸದರು, ಇ- ಸ್ವತ್ತು ಸೇರಿದಂತೆ ವಿವಿಧ ಕೆಲಸಗಳ ಬಗ್ಗೆ ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ಕ್ರಮಕ್ಕೆ ಸೂಚನೆ ನೀಡಿದರು.
Read also : ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್
ಇದೇ ವೇಳೆ ಬಹಳ ದಿನಗಳಿಂದ ಒಂದೇ ಕಡೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸ್ಥಳ ಬದಲಾಯಿಸಲು ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು ಬಂದರೆ ಅಂಥವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೇಯರ್ ಕೆ. ಚಮನ್ ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ಮುಖಂಡರಾದ ಡಿ. ಬಸವರಾಜ್, ವಿನಾಯಕ್ ಪೈಲ್ವಾನ್ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.