ದಾವಣಗೆರೆ ಜು.06 : ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ತೆರಿಗೆಯನ್ನು ಪಾವತಿಸದೇ ಇರುವವರು ಜುಲೈ 31 ಒಳಗಾಗಿ ಪಾವತಿಸಿ ಚಾಲ್ತಿ ಸಾಲಿನ ಆಸ್ತಿ ತೆರಿಗೆಯ ಶೇ.5ರ ರಿಯಾಯಿತಿ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳಬೇಕು.
ತಪ್ಪಿದಲ್ಲಿ ಆಗಸ್ಟ್ 1 ರಿಂದ ಶೇ.2 ರಷ್ಟು ದಂಡವನ್ನು ವಿಧಿಸಲಾಗುವುದೆಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.