ಹರಿಹರ (Harihara): ಹಿಂದೆ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ 03 ರಾಬರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತನ್ನು ವಾರಸುದಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹಸ್ತಾಂತರಿಸಿದರು.
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದಲ್ಲಿ ಜನಸಂರ್ಪಕ ನಡೆಸಿದರು. ಸಾರ್ವಜನಿಕರುಗಳು ಅಪರಾಧಗಳನ್ನು ತಡೆಗಟ್ಟಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಬೀಟ್ ಪದ್ಧತಿಗೆ ಸಂಬಂಧಿಸಿದಂತೆ ಬೀಟ್ ಕರ್ತವ್ಯಕ್ಕೆ ನೇಮಕಗೊಂಡ ಸಿಬ್ಬಂದಿಯವರ ಹಾಗೂ ಬೀಟ್ ಉಸ್ತುವಾರಿ ಅಧಿಕಾರಿಗಳ ಹೆಸರು, ಮೊಬೈಲ್ ನಂಬರ್ & ಭಾವಚಿತ್ರವುಳ್ಳ ಫಲಕಗಳನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಉದ್ಘಾಟಿಸಿದರು.
ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ & ಸಿಬ್ಬಂದಿಯವರಿಗೆ ಎಸ್ಪಿ ಉಮಾ ಪ್ರಶಾಂತ್ ಬಹುಮಾನ ವಿತರಣೆ ಮಾಡಿದರು.
Read also : “ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಬಸವರಾಜ್, ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಪ್ರಭು ಡಿ ಕೆಳಗಿನಮನಿ ಪಿ.ಎಸ್.ಐ(ಕಾ&ಸು) ಮತ್ತು ಚಿದಾನಂದಪ್ಪ.ಎಸ್.ಬಿ. ಪಿಎಸ್ ಐ(ತನಿಖೆ) ಮಲೇಬೆನ್ನೂರು ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯವರು ಸಾರ್ವಜನಿಕರು ಉಪಸ್ಥಿತರಿದ್ದರು.