ದಾವಣಗೆರೆ: ಸಾಲ ಮರುಪಾವತಿ ಕಾಟದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದ ಚಿತ್ರಲಿಂಗ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಮೈಕ್ರೋ ಫೈನಾನ್ಸ್‌ಗಳ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ.
ಮೃತ ವ್ಯಕ್ತಿ ಮೂರು ಖಾಸಗಿ ಮೈಕ್ರೋ ಫೈನಾ-ನ್ಸ್‌ಗಳಲ್ಲಿ ₹ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಫೈನಾನ್ಸ್ ಸಿಬ್ಬಂದಿ ಒತ್ತಡ ಹೇರುತ್ತಿದ್ದರು ಎಂದು ಸಾವಿಗೂ ಮುನ್ನ ಬರೆದ ಪತ್ರದಲ್ಲಿ ಚಿತ್ರಲಿಂಗ ಉಲ್ಲೇಖಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.