ದಾವಣಗೆರೆ (Davanagere): ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಶೀಘ್ರವೇ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಜಿಲ್ಲಾ ಛಲವಾದಿ ಸಮಾಜ ಹಾಗೂ ಮಾದಿಗ ಸಮಾಜ ನಿರ್ಧಾರ ಮಾಡಿವೆ.
ಈ ಕುರಿತು ನಗರದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಎರಡು ಸಮಾಜದ ಮುಖಂಡರು ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರ ವಿಳಂಬ ಧೋರಣೆ ಖಂಡಿಸಿದರು. ಆಕ್ಟೋಬರ 23 ರಂದು ಬೃಹತ್ ಹೋರಾಟಕ್ಕೆ ಕರೆ ನೀಡಿದರು.
ಈ ವೇಳೆ ಮಾತನಾಡಿದ ಮಾದಿಗ ಸಮಾಜದ ಹಿರಿಯ ಹೋರಾಟಗಾರ ಬಿ.ಎಂ.ಹನುಮಂತಪ್ಪ, ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಬೇಕು. ಗೊಂದಲ ಸೃಷ್ಟಿಸುವವರು ಇದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳದೇ ನಮ್ಮ ಹಕ್ಕು ಪಡೆಯಬೇಕಾದರೆ, ನಮ್ಮ ಮಕ್ಕಳು ಶಿಕ್ಷಣ ಪಡೆದು ಸರ್ಕಾರಿ ಉದ್ಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಸಮಾಜ ಬಾಂಧವರು ಮುನ್ನುಗಿ ಹೋರಾಟದಲ್ಲಿ ಧುಮುಕಬೇಕೆಂದು ಕರೆ ನೀಡಿದರು.
ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕಾಗಿದೆ. ಒಳ ಮೀಸಲಾತಿ ಪಡೆಯಲು ಅಸ್ಪೃಶ್ಯ ಸಮಾಜಗಳು ಒಂದು ವೇದಿಕೆಯಲ್ಲಿ ಬರಬೇಕು. ಹೊಲೆ ಮಾದಿಗರು ಒಟ್ಟಾಗಿ ಸೇರಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಕರ್ನಾಟಕದಲ್ಲಿ ಅಸ್ಪೃಶ್ಯ ಸಮಾಜಗಳಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿಗೊಳಿಸುವಂತೆ ಆಯಾ ರಾಜ್ಯಗಳಿಗೆ ಸೂಚನೆ ಕೊಟ್ಟಿರುವುದರಿಂದ ನಾವು ಯಾರಿಗೂ ಹೆದರಬೇಕಾಗಿಲ್ಲ. ಸಮಾಜ ಬಾಂಧವರು ಮುನ್ನುಗಿ ಬಂದು ಹೋರಾಟದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ನಿವೃತ್ತ ಎಸ್ಪಿ ರವಿನಾರಾಯಣ ಮಾತನಾಡಿ, ಸುಪ್ರೀಂ ಆದೇಶವಾದರು ಸಹ ರಾಜ್ಯ ಸರಕಾರ ಒಳಮೀಸಲಾತಿ ಜಾರಿಗೆ ತರದೇ ಅಸ್ಪøಶ ಸಮಾಜದ ಬಗ್ಗೆ ನಿರ್ಲಕ್ಷ್ಯ ಭಾವನೆ ತೆಳದಿದೆ. ಕಳೆದ 30 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ನಮ್ಮ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಸಹ ಗೌರವ ನೀಡದೆ. ಅದರೆ, ರಾಜ್ಯ ಸರಕಾರ ಮಾತ್ರ ದಿನಕ್ಕೊಂದು ನೆಪ ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿವೃತ್ತ ಎಸ್ಪಿ ಹಾಗೂ ಛಲವಾದಿ ಸಮಾಜದ ಮುಖಂಡ ಎನ್.ರುದ್ರಮುನಿ ಮಾತನಾಡಿ, ನಮ್ಮನ್ನು ಒಡೆದಾಳುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿ ಮನೆ ಮಾಡಿರುವ ಅಸಮಾನತೆ ಆತಂಕಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ತೆರೆ ಎಳೆದಿದೆ. ರಾಜ್ಯ ಸರ್ಕಾರ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕು’ ಎಂದು ಆಗ್ರಹಿಸಿದರು.
ಮಾದಿಗ ಸಮಾಜದ ಮುಖಂಡ ಆಲೂರು ನಿಂಗರಾಜು ಮಾತನಾಡಿ, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದೆ. ಈ ತೀರ್ಪನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು. ಇಷ್ಟೊತ್ತಿಗಾಗಲೇ ಸರ್ಕಾರ ಜಾರಿಗೊಳಿಸಬೇಕಾಗಿತ್ತು. ಆದರೆ ಮೀನಾಮೇಷ ಮಾಡುತ್ತಿದೆ. ಹೀಗಾಗಿ ಅ.23ರಂದು ಮಾದಿಗ ಮತ್ತು ಛಲವಾದಿ ಸಮಾಜಗಳ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಕನಿಷ್ಠ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಮಾದಿಗ ಸಮಾಜದ ಮುಖಂಡ ಹಾಗೂ ಪಾಲಿಕೆ ಮಾಜಿ ಸದಸ್ಯ ಎಂ. ಹಾಲೇಶ್ ಮಾತನಾಡಿ, ಮಾದಿಗ ಮತ್ತು ಛಲವಾದಿ ಎರಡು ಸಮಾಜಕ್ಕೆ ಅನ್ಯಾಯವಾದಾಗ ಒಟ್ಟಾಗಿ ಹೋರಾಟ ಮಾಡಬೇಕು. ಈಗ ಒಳಮೀಸಲಾತಿ ಜಾರಿಗೊಳಿಸಲು ಎರಡು ಸಮಾಜಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕೆಂದು ಕರೆ ನೀಡಿದರು.
Read also : ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ
ಛಲವಾದಿ ಮುಖಂಡರಾದ ಎಚ್.ಕೆ.ಬಸವರಾಜ, ಜಯಪ್ರಕಾಶ್ ಮಾತನಾಡಿ, ಸ್ವಾರ್ಥ ರಾಜಕಾರಣಿಗಳನ್ನು ದೂರ ಇಡಬೇಕು. ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿ ಮಾಡಬೇಕು. ನಮ್ಮ ಹಕ್ಕು ಪಡೆಯಲು ಜಗ್ಗಟ್ಟಾಗಿ ಹೋರಾಟ ಮಾಡಬೇಕೆಂದರು.
ಮಾದಿಗ ಸಮಾಜದ ಮುಖಂಡ ಎಚ್.ಮಲ್ಲೇಶ್ ಮಾತನಾಡಿ, ಕಾಂಗ್ರೆಸ್ ಸರಕಾರ ತನ್ನ ಪ್ರಾಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೆ ಘೋಷಿಸಿದೆ. ಜೊತೆಗೆ ಸುಪ್ರೀಂ ತೀರ್ಪು ಇದ್ದರೂ ಸಹ ಮುಖ್ಯಮುಂತ್ರಿ ಸಿದ್ದರಾಮಯ್ಯ ಜಾರಿ ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ನಿರಂಜನ್ ಮಾತನಾಡಿ, ಪರಿಶಿಷ್ಟ ಜಾತಿಯ ಕೆಲವು ಜನಗಳು ನಾವು ಮೀಸಲಾತಿಯಿಂದ ಉತ್ತಮ ಅಧಿಕಾರ ಮತ್ತು ಸವಲತ್ತುಗಳ ಲಾಭ ಪಡೆದುಕೊಂಡಿದ್ದೇವೆ. ಆದರೆ, ಮೀಸಲಾತಿಯ ಲಾಭ ಪರಿಶಿಷ್ಟ ಜಾತಿಯ ಒಳಪಂಗಡಗಳಿಗೆ ಅದರಲ್ಲೂ ಅಸ್ಪೃಶ್ಯರಿಗೆ ಇದರ ಸಾಮಾಜಿಕ ನ್ಯಾಯ ದೊರಕಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಉಪಜಾತಿಗಳು ಒಂದುಗೂಡಿ ಒಳಮಿಸಲಾತಿಗೆ ಆಗ್ರಹಿಸಿ ನಮ್ಮ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ್ ಕುಂದವಾಡ, ಮಾತನಾಡಿ ರಾಜಕೀಯ ನಾಯಕರುಗಳು ತಮ್ಮ ಅವಕಾಶವಾದಿತನಕ್ಕಾಗಿ ಈ ಪರಿಶಿಷ್ಟ ಜಾತಿಗಳಲ್ಲಿ ಕೆಲವು ಜಾತಿಗಳನ್ನು ಸೇರ್ಪಡೆಗೊಳಿಸಿದ್ದಾರೆ. ಇದು ಅಸ್ಪೃಶ್ಯ ಜಾತಿಗಳನ್ನು ತುಳಿಯುವ ಹುನ್ನಾರ. ನಾವು ಯಾರದೇ ಮೀಸಲಾತಿಯನ್ನು ವಿರೋಧಿಸುವ ಮನಸ್ಥಿತಿಯವರಲ್ಲ. ಎಲ್ಲರೂ ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೊಳ್ಳಬೇಕಾಗಿದೆ. ಆದರೂ ಅವರು ವಿರೋಧಿಸಿದರೆ ನಾವು ಕೂಡ ಅವರು ಪರಿಶಿಷ್ಟ ಜಾತಿಯಲ್ಲಿರುವುದನ್ನೇ ವಿರೋಧಿಸಿ ಹೋರಾಟ ನಡೆಸಬೇಕಾಗುತ್ತದೆ. ಒಳ ಮೀಸಲಾತಿಯನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಕಾಂಗ್ರೆಸ್ ನಾಯಕರುಗಳು ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದರೂ ಜಾರಿಗೊಳಿಸುವ ಚಿಂತನೆ ಮಾಡುತ್ತಿಲ್ಲ. ಒಳ ಮೀಸಲಾತಿ ಜಾರಿಗೊಳಿಸದಿದ್ದಲ್ಲಿ ಇವರನ್ನು ಕೂಡ ಮುಂದಿನ ಚುನಾವಣೆಗಳಲ್ಲಿ ಮನೆಗೆ ಕಲಿಸುವ ಸಾಧ್ಯತೆಯನ್ನು ನಾವು ಪರಿಶೀಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಿರಿಯ ಪತ್ರಕರ್ತ ಕೆ.ಏಕಾಂತಪ್ಪ, ಎಸ್ ಮಲ್ಲಿಕಾರ್ಜುನ್ , ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಕೆ.ಎಸ್.ಗೋವಿಂದ್ ರಾಜ್ , ಕುಮಾರ ಹನುಮಂತಪ್ಪ, ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಸೋಮಲಾಪುರದ ಹನುಮಂತಪ್ಪ, ಭಾನುವಾರ ಮಾದಿಗ ಮತ್ತು ಛಲವಾದಿ ಸಮಾಜಗಳ ಎಲ್ಲಾ ಸರ್ಕಾರಿ ನೌಕರರು, ವಕೀಲರು, ಉದ್ಯಮಿಗಳು, ಪೌರ ಕಾರ್ಮಿಕರು, ಜನ ಪ್ರತಿನಿಧಿಗಳು, ಎಲ್ಲಾ ಪ್ರಗತಿ ಪರ ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿದ್ದರು.