Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
ತಾಜಾ ಸುದ್ದಿ

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Dinamaana Kannada News
Last updated: January 28, 2025 1:27 pm
Dinamaana Kannada News
Share
davanagere
davanagere
SHARE
ದಾವಣಗೆರೆ (Davanagere): ದೇವದಾಸಿ ಮಹಿಳೆಯರ ಮಕ್ಕಳಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ಸರ್ಕಾರ 10  ಲಕ್ಷ ರೂ. ನೀಡಬೇಕು ಎಂದು  ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಜಾತಿಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು. ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು. ಆದರೆ ಅಧಿಕಾರಿಗಳು ಈ ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ತಂದರು.
ದೇವದಾಸಿ ಮಹಿಳೆಯರ ಮಕ್ಕಳಿಗೆ ಮನೆ ನಿರ್ಮಿಸಿಕೊಳ್ಳಲು ಸರ್ಕಾರ ಪ್ರಸ್ತುತ 2 ಲಕ್ಷ ರೂ. ಹಣ ನೀಡುತ್ತಿದೆ. ಆದರೆ ೨ ಲಕ್ಷ ರೂ.ಗೆ ಸಿಮೆಂಟ್, ಮರಳು ತರಲು ಆಗುವುದಿಲ್ಲ. ಮನೆ ಕಟ್ಟಿಕೊಳ್ಳುವುದು ಕನಸಿನ ಮಾತು. ಹೀಗಾಗಿ ಸರ್ಕಾರ ಕನಿಷ್ಠ 10 ಲಕ್ಷ ರೂ. ನೀಡಿದರೆ ಒಂದು ಸೂರು ಕಟ್ಟಿಕೊಳ್ಳಲು ಸಾಧ್ಯವಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.
ಸ್ಥಳೀಯ ಸಂಸ್ಥೆಗಳು ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಸಾರ್ವಜನಿಕರಿಗೆ ನಿವೇಶನಗಳಿಗೆ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ದೇವದಾಸಿ ಮಕ್ಕಳಿಗೆ ಶೇ.5ರಷ್ಟು ನಿವೇಶನ ಮೀಸಲಿಡಬೇಕು. ಶಾಲಾ ಕಾಲೇಜು ಮತ್ತು ಪ್ರತಿಷ್ಠಿತ ವಸತಿ ನಿಲಯಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆದ ಮಕ್ಕಳಿಗೆ ಸರ್ಕಾರಿ ಹುದ್ದಗಳಿಗೆ  ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ದಾವಣಗೆರೆ, ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ ಇನ್ನೂ ದೇವದಾಸಿ ಪದ್ಧತಿ ಮುಂದುವರಿದಿದೆ. ಇದನ್ನು ತಡೆಯಲು ಅಧಿಕಾರಿಗಳು ಮುಂದಾಗುತ್ತಿಲ್ಲ. ನರದೌರ್ಬಲ್ಯದಿಂದ ಮಹಿಳೆಯರಿಗೆ ಕೂದಲು ಗಂಟು ಬೀಳುತ್ತವೆ. ಇದು ದೇವರ ಮುಡಿ ಎಂದು ಬಿಟ್ಟುಕೊಳ್ಳುತ್ತಾರೆ. ಈ ಬಗ್ಗೆ ಅಧಿಕಾರಿಗಳು ಅಂತಹ ಮಹಿಳೆಯರಿಗೆ ವೈಜ್ಞಾನಿಕವಾಗಿ ಅದರಿಂದ ಹೊರ ಬರಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಜೊತೆಗೆ ನಕಲಿ ಜಾತಿ ಪ್ರಮಾಣ ಸೃಷ್ಟಿ ಮಾಡುವುದು ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ತಲೆಕಡಿಸಿಕೊಳ್ಳುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದರು.
ದೇವದಾಸಿ ಪದ್ಧತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಬೇಕು. ಜೊತೆಗೆ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

Read also : ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere ಒಳ‌ಮೀಸಲಾತಿ ಜಾರಿಗೊಳಿಸದಿದ್ದರೆ ಕುರ್ಚಿ ಖಾಲಿ ಮಾಡಿ : ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕನ್ನಡ ಜ್ಯೋತಿ ರಥ ಯಾತ್ರೆಗೆ ಕುರ್ಕಿ ಗ್ರಾಮದಲ್ಲಿ ಅದ್ದೂರಿ ಸ್ವಾಗತ

ದಾವಣಗೆರೆ  (Davanagere) :  ಮಂಡ್ಯ ದಲ್ಲಿ ಡಿಸೇಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ…

By Dinamaana Kannada News

Crime news : ಕೌಟುಂಬಿಕ ಸಮಸ್ಯೆ ಪತ್ನಿಯನ್ನು ಚಾಕುವಿನಿಂದ ಹಿರಿದು ಕೊಂದ ಪತಿ

ದಾವಣಗೆರೆ:  ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ‌ನ್ಯಾಯ‌ ಮಂಡಳಿಗೆ ಆಗಮಿಸಿದ್ದ ವೇಳೆ ಪತಿಯೇ ಪತ್ನಿಯನ್ನು ಕೊಂದ ಘಟನೆ  ನಗರದಲ್ಲಿ ಘಟಿಸಿದೆ. ತಾಲೂಕಿನ …

By Dinamaana Kannada News

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?