ದಾವಣಗೆರೆ (Davanagere district) : ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಕ್ಕಳಿಗೆ ಸಲಹೆ ನೀಡಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಗ್ರಾಮದ ಎಸ್.ಜೆ.ಎಂ ಪ್ರೌಢಶಾಲೆಯ ಕ್ರೀಡಾ ಮೈದಾನದಲ್ಲಿ ಸೋಮವಾರ ಜಿಲ್ಲಾ ಪಂಚಾಯತ್, ಚನ್ನಗಿರಿ ತಾಲೂಕು ಪಂಚಾಯತ್ ಸಹಯೋಗದೊಂದಿಗೆ 2024-25ನೇ ಸಾಲಿನ ತ್ಯಾವಣಿಗೆ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿನಿತ್ಯ ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಇದರಿಂದ ವಿದ್ಯಾರ್ಥಿಗಳ ಆರೋಗ್ಯ ಸದೃಢವಾಗುವ ಜೊತೆಗೆ ದೈಹಿಕ, ಮಾನಸಿಕ ಸ್ವಾಸ್ಥ್ಯವೂ ಚೆನ್ನಾಗಿರುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳು ಇದ್ದಾರೆ. ಅವರಿಗೆ ಮಾರ್ಗದರ್ಶನದ ಅಗತ್ಯ ಇದೆ. ಕ್ರೀಡಾ ಪಟುಗಳಿಗೆ ಪೆÇ್ರೀತ್ಸಾಹಿಸುವ ದಿಸೆಯಲ್ಲಿ ಸರ್ಕಾರ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು ಎಂದು ಕರೆ ನೀಡಿದರು.
Read also : Davanagere | ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಡಿಸಿ ಸೂಚನೆ
ಕ್ರೀಡಾಪಟುಗಳು ಓಲಿಪಿಂಕ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಗುರಿ ಹೊಂದಬೇಕು. ಇತ್ತೀಚೆಗೆ ಪ್ಯಾರಿಸ್ನಲ್ಲಿ ನಡೆದ ಓಲಂಪಿಕ್ ಕ್ರೀಡಾಕೂಟದಲ್ಲಿ ಮನು ಭಾಕರ್, ನೀರಜ್ ಚೋಪ್ರಾ ಸೇರಿದಂತೆ ಇತರೆ ಕ್ರೀಡಾಪಟುಗಳು ಪದಕ ಗೆಲ್ಲುವ ಮೂಲಕ ಭಾರತೀಯರ ಪ್ರಶಂಸೆಗೆ ಪಾತ್ರರಾದರು. ಅದೇ ರೀತಿ ನೀವು ಕೂಡ ಭವಿಷ್ಯದಲ್ಲಿ ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಅವಕಾಶ ಗಿಟ್ಟಿಸಿಕೊಂಡು ಅತ್ಯುತ್ತಮ ಕ್ರೀಡಾಪಟುಗಳಾಗಿ ಹೊರ ಹೊಮ್ಮಬೇಕೆಂದು ಕಿವಿಮಾತು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಕರಿಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಪಿ.ಸಿ.ಗೋವಿಂದಸ್ವಾಮಿ, ಬಿ.ಜಿ.ಸದಾಶಿವಪ್ಪ, ಡಾ.ಎಸ್.ಶಂಕರಪ್ಪ ಸೇರಿದಂತೆ ಇನ್ನಿತರರಿದ್ದರು.