Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉತ್ತಮ ಆಡಳಿತ  ಸಹಿಸಲಾಗದೇ ವಿಪಕ್ಷ ಸದಸ್ಯರ ಆರೋಪ : ಮೇಯರ್ ವಿನಾಯಕ್ ಪೈಲ್ವಾನ್  
ತಾಜಾ ಸುದ್ದಿ

ಉತ್ತಮ ಆಡಳಿತ  ಸಹಿಸಲಾಗದೇ ವಿಪಕ್ಷ ಸದಸ್ಯರ ಆರೋಪ : ಮೇಯರ್ ವಿನಾಯಕ್ ಪೈಲ್ವಾನ್  

Dinamaana Kannada News
Last updated: June 29, 2024 12:21 pm
Dinamaana Kannada News
Share
Corporation Davangere
ಮಹಾನಗರ ಪಾಲಿಕೆ ದಾವಣಗೆರೆ
SHARE

ದಾವಣಗೆರೆ:   ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಆವರಗೆರೆ, ಭಾರತ್ ಕಾಲೋನಿ, ಬಸಾಪುರ ಗ್ರಾಮದಲ್ಲಿನ ರಾಜಕಾಲುವೆಗಳಿಗೆ ಆಯುಕ್ತರು, ಮೇಯರ್, ಪಾಲಿಕೆಯ ಕಾಂಗ್ರೆಸ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಷ್ಟು ಬೇಗ ಉಳಿದಿರುವ ಹೂಳೆತ್ತುವ ಕಾರ್ಯ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಪಾಲಿಕೆ ಆಯುಕ್ತೆ ರೇಣುಕಾ, ಮೇಯರ್ ವಿನಾಯಕ್ ಪೈಲ್ವಾನ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಲತೀಫ್, ಮೀನಾಕ್ಷಿ ಜಗದೀಶ್, ಆಡಳಿತ ಪಕ್ಷದ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಶಿವಲಿಂಗ ಕೊಟ್ರಯ್ಯ, ಎಇ ಮನೋಹರ್, ಪ್ರೀತಂ ಸೇರಿದಂತೆ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲಿಸಿತು.

ಎರಡೂವರೆ ಕಿಲೋಮೀಟರ್ ವರೆಗೆ ಹೂಳೆತ್ತುವ ಕಾರ್ಯ ನಡೆದಿದ್ದು, ಉಳಿದಿರುವ ಒಂದೂವರೆ ಕಿಲೋಮೀಟರ್ ವರೆಗಿನ ಹೂಳು ಆದಷ್ಟು ಬೇಗ ತೆರವುಗೊಳಿಸಿ. ಮಳೆಗಾಲ ಶುರುವಾಗಿರುವುದರಿಂದ ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಹೂಳೆತ್ತುವ ಕಾರ್ಯ ಮುಗಿಸಿ ಆದಷ್ಟು ಬೇಗ ನೀರು ಸರಾಗವಾಗಿ ಹೋಗುವಂತೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು. ಅಲ್ಲದೇ, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮನೆಯೊಳಗೆ ನೀರು ನುಗ್ಗುವುದು,
ಚರಂಡಿಯಲ್ಲಿ ನೀರು ಹೆಚ್ಚಾಗುವುದು, ರಸ್ತೆ ಮೇಲೆ ನೀರು ಹರಿಯುವುದಕ್ಕೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಈ ವೇಳೆ ಮಾತನಾಡಿದ ಮೇಯರ್ ವಿನಾಯಕ್ ಪೈಲ್ವಾನ್ ಹಾಗೂ ಗಡಿಗುಡಾಳ್ ಮಂಜುನಾಥ್ ಅವರು, ರಾಜಕಾಲುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಕಾಲುವೆಯಲ್ಲಿನ ಹೂಳೆತ್ತುವ ಕಾರ್ಯ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಉಳಿದ ಕೆಲಸ ಮುಗಿಸಿ ಜನರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳುವಂತೆ ನಿರ್ದೇಶನ ನೀಡಲಾಯಿತು ಎಂದು ಮಾಹಿತಿ ನೀಡಿದರು.

ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪರ ಕೊಡುಗೆ ಅಪಾರ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿರುವ ವಿಚಾರ. ಆದ್ರೆ, ವಿಪಕ್ಷ ಸದಸ್ಯರು ವಿನಾಕಾರಣ ಆರೋಪ ಮಾಡುತ್ತಾರೆ. ಮೊದಲಿನಿಂದಲೂ ಮಲ್ಲಿಕಾರ್ಜುನ್ ಅವರ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿನವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಬಿಜೆಪಿ ಆಡಳಿತದಲ್ಲಿದ್ದಾಗ ದಾವಣಗೆರೆ ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಯಾಕೆ ಆಗಲಿಲ್ಲ? ಬೆಂಗಳೂರಿನಿಂದ ಇಲ್ಲಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಸಚಿವರು, ಶಾಸಕರೂ ಆಗಿರುವ ಕಾರಣ ಮಲ್ಲಿಕಾರ್ಜುನ್ ಅವರ ಸಲಹೆ, ಮಾರ್ಗದರ್ಶನ ಪಡೆಯುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಜಲಸಿರಿ ಯೋಜನೆಯಡಿ ಬಿಲ್ ನೀಡಿಕೆ ವಿಚಾರ ಸಂಬಂಧ ಸಚಿವರ ಜೊತೆ ಸಮಾಲೋಚನೆ ನಡೆಸುತ್ತೇವೆ. ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಸಚಿವರ ಬಳಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. 2021ರಲ್ಲಿ ಆಸ್ತಿ ತೆರಿಗೆ ಹೆಚ್ಚಿಸಲು ಬಿಜೆಪಿ ಆಡಳಿತವಿದ್ದ ಪಾಲಿಕೆಯಲ್ಲಿ ನಿರ್ಧರಿಸಲಾಗಿತ್ತು. ಆಗಲೇ ನಾವು ವಿರೋಧ ಮಾಡಿದ್ದೇವೆ. ಇದಕ್ಕೆ ಕ್ಯಾರೇ ಎನ್ನಲಿಲ್ಲ. ಆದ್ರೆ, ಈಗ ಮುದ್ರಾಂಕ ಶುಲ್ಕ, ಸಬ್ ರಿಜಿಸ್ಟ್ರಾರ್ ಶುಲ್ಕವೂ ಸೇರಿದಂತೆ ಎಲ್ಲಾ ದರಗಳು ಹೆಚ್ಚಳವಾಗಿವೆ. ಕೇವಲ ದಾವಣಗೆರೆ ಮಹಾನಗರ ಪಾಲಿಕೆ ಮಾತ್ರವಲ್ಲ, ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಹೆಚ್ಚಳವಾಗಿದೆ. ಇದು ವಿಪಕ್ಷದವರಿಗೆ ಗೊತ್ತಿಲ್ಲವೇ ಎಂದು  ಪ್ರಶ್ನಿಸಿದರು.

ಬಿಜೆಪಿಯಲ್ಲಿ ಲೋಕಸಭೆ ಚುನಾವಣೆಗೆ ಮುನ್ನ, ಚುನಾವಣಾ ಫಲಿತಾಂಶ ಬಂದ ಬಳಿಕ ಏನಾಗಿದೆ? ಏನಾಗುತ್ತಿದೆ ಎಂಬುದು ಜಿಲ್ಲೆಯ ಜನತೆ ನೋಡುತ್ತಿದ್ದಾರೆ. ನಿತ್ಯವೂ ಕಚ್ಚಾಡುತ್ತಾ, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಿರುವುದು ನಮಗೂ ಗೊತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಸದೃಢ ಆಡಳಿತ ನೀಡಲಾಗುತ್ತಿದೆ. ಪಾಲಿಕೆಯಲ್ಲಿ ಉತ್ತಮ ಕೆಲಸಗಳಾಗುತ್ತಿದ್ದು, ಇದು ಸಹಿಸಲು ಆಗದೇ ವಿಪಕ್ಷ ಸದಸ್ಯರು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ನಿಸ್ವಾರ್ಥತೆಯಿಂದ ಕೆಲಸ ಮಾಡುವವರ ಸಂಖ್ಯೆ ಕಡಿಮೆ : ನ್ಯಾ.ರಾಜೇಶ್ವರಿ ಎನ್.ಹೆಗಡೆ
Next Article Power outage ಹರಿಹರ : ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ

ಹರಿಹರ: ಭಗವಾನ್ ಯೇಸು ಕ್ರಿಸ್ತನ ಸ್ಮರಣೆಯ ಶುಭ ಶುಕ್ರವಾರದ ಆಚರಣೆಯನ್ನು ನಗರದ ಆರೋಗ್ಯಮಾತೆ ಬಸಿಲಿಕ ಪುಣ್ಯಕ್ಷೇತ್ರ ಚರ್ಚ್‌ನಲ್ಲಿ ಭಕ್ತಿ ಹಾಗೂ…

By Dinamaana Kannada News

ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಮಹಾವೀರ ಮ.ಕರೆಣ್ಣವರ

ದಾವಣಗೆರೆ (Davanagere): ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ…

By Dinamaana Kannada News

ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ

ಜಗಳೂರು: ತಾಲೂಕಿನ 178ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆಯ 'ಬಹುಗ್ರಾಮ ಕುಡಿಯುವ ನೀರಿನ ಯೋಜನೆ'ಯು ಅಧಿಕಾರಿಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?