ದಾವಣಗೆರೆ : ಅಪ್ರಾಪ್ತ ಬಾಲಕ ವಾಹನ ಚಾಲನೆ ಮಾಡಿದ ಹಿನ್ನಲೆಯಲ್ಲಿ ವಾಹನ ಮಾಲೀಕರಿಗೆ ಸಂಚಾರಿ ಪೊಲೀಸರು 25 ಸಾವಿರೂ ದಂಡ ಹಾಕಿದ್ದಾರೆ.
ದಕ್ಷಿಣ ಸಂಚಾರ ಠಾಣೆ ಪಿಎಸ್ಐ ಶೈಲಜಾ ಮತ್ತು ಶಕುಂತಲಾ ಹಾಗೂ ಸಿಬ್ಬಂದಿಗಳ ತಂಡ ನಗರದ ಶಾರದಾಂಭ ವೃತ್ತದ ಸರ‍್ವಜನಿಕ ರಸ್ತೆಯಲ್ಲಿ ಬುಲೆಟ್ ಬೈಕ್ ನ್ನು ಅಪ್ರಾಪ್ತ ವಯಸ್ಸಿನ ಬಾಲಕನ ಸರ‍್ವಜನಿಕ ರಸ್ತೆ ಮೇಲೆ ಚಲಾಯಿಸಿದ ಹಿನ್ನಲೆಯಲ್ಲಿ ಬುಲೆಟ್ ಬೈಕ್ ಅನ್ನು ಜಪ್ತು ಪಡಿಸಿಕೊಂಡು ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, 3 ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ದಾವಣಗೆರೆ ನ್ಯಾಯಾಲಯಕ್ಕೆ ಬೈಕ್ ಮಾಲೀಕರ ಮೇಲೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ನ್ಯಾಯಾಲಯವು ಜ. 09-01-2026 ರಂದು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಬೈಕ್ ಅನ್ನು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದ ಮಾಲೀಕರಿಗೆ 25,000/- ರೂಗಳ ದಂಡವನ್ನು ವಿಧಿಸಿದೆ.
Read also : ದಾವಣಗೆರೆ:ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ.
ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕರ‍್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿರುತ್ತಾರೆ.
