ದಾವಣಗೆರೆ; ಜುಲೈ 1 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್, ಆಂಗ್ಲೋಇಂಡಿಯನ್ ಗೆ ಸೇರಿದವರು ಅರ್ಜಿ ಸಲ್ಲಿಸಬಹುದು. ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ತರಬೇತಿಯ ಅವಧಿ 4 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.5000 ತರಬೇತಿ ಭತ್ಯೆ ನೀಡಲಾಗುವುದು.
ಜಿಲ್ಲೆಯಿಂದ 05 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ, ಹೆಚ್ಚಿನ ಮಾಹಿತಿಗೆ ದೂರವಾಣಿ 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.