ದಾವಣಗೆರೆ : ತಾಲ್ಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ೧೬ ಹೆಣ್ಣು ಮೇಕೆ, ೯ ಗಂಡು ಮೇಕೆ ಮೃತಪಟ್ಟಿರುವ ಘಟನೆ ನಡೆದಿದೆ.
ದಾವಣಗೆರೆ ತಾಲ್ಲೂಕಿನ ಸುತ್ತಮುತ್ತ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಿತು. ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಮತ್ತು ರೇವತಿಬಾಯಿ ಅವರಿಗೆ ಸೇರಿದ ತಮ್ಮ ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು.
ಮಳೆ ಆರಂಭವಾದಾಗ ಮೇಕೆಗಳು ಮರದ ಕೆಳಗೆ ಬಂದು ನಿಂತಿವೆ. ಈ ವೇಳೆ ಸಿಡಿಲು ಬಡಿದು ೧೬ ಹೆಣ್ಣು ಮೇಕೆ ಮತ್ತು ೯ ಗಂಡು ಮೇಕೆ ಮೃತಪಟ್ಟಿವೆ.
ಅಂದಾಜು ೫ ಲಕ್ಷ ನಷ್ಟ ಸಂಭವಿಸಿದ್ದು, ಪಾಪ್ಯಾನಾಯ್ಕ ಅವರು ಉಳಿದ ಮೇಕೆಗಳನ್ನು ಹೊಡೆದುಕೊಂಡು ಬರಲು ಸಿಡಿಲು ಬಡಿದ ಸ್ಥಳದಿಂದ ದೂರ ಹೋಗಿದ್ದರಿಂದ ಪಾಪ್ಯಾನಾಯ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಕಂದಾಯ ಅಧಿಕಾರಿಗಳು, ಪೊಲೀಸರು ಪರಿಶೀಲನೆ ನಡೆಸಿದರು.