Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ಸಿಎಂ,ಡಿಸಿಎಂಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ
ತಾಜಾ ಸುದ್ದಿ

ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ಸಿಎಂ,ಡಿಸಿಎಂಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

Dinamaana Kannada News
Last updated: June 28, 2025 1:08 pm
Dinamaana Kannada News
Share
Bhadra
SHARE
ದಾವಣಗೆರೆ: ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಗೊಳಿಸಿ ಭದ್ರಾ ಅಚ್ಚುಕಟ್ಟು ಪ್ರದೇಶದ ಹಿನ್ನೀರು ಪ್ರದೇಶ ಅಥವಾ ಬೇರೆ ಮಾರ್ಗದಿಂದ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಭದ್ರಾ ಜಲಾಶಯದ ಹೊಸ್ತಿಲಲ್ಲಿನ ಬಲದಂಡೆ ನಾಲೆಯಿಂದ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ  1236  ಗ್ರಾಮಗಳಿಗೆ ಹಾಗೂ ಹೊಸದುರ್ಗ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿ ಈಗ ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ ಈ ಕಾಮಗಾರಿ ಸ್ಥಗಿತಗೊಳಿಸುವಂತೆ ಕೋರಿದರು.
‘ಬಲದಂಡೆಯನ್ನು ಸೀಳಿ ನೀರು ಒಯ್ಯಲಾಗುತ್ತಿದೆ. ಇದರಿಂದ ಕಾಲುವೆಯ ನೀರಿನ ಸಹಜ ಹರಿವಿಗೆಎ ಅಡ್ಡಿಯಾಗಲಿದೆ. ಆರಂಭದಲ್ಲಿಯೇ ನೀರಿನ ಹರಿವಿನ ವೇಗ ಕಡಿಮೆ ಆದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ, ದಾವಣಗೆರೆ, ಹೊನ್ನಾಳಿ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೊನೆಯ ಭಾಗದವರೆಗೆ ನೀರು ಸರಾಗವಾಗಿ ಹರಿಯುವುದಿಲ್ಲ’ ಎಂಬುದು ರೈತರ ಆರೋಪವಾಗಿದೆ.
ಅಲ್ಲದೇ, ಭದ್ರಾ ಮೇಲ್ದಂಡೆ ಯೋಜನೆಯಡಿ ಜಲಾಶಯದಿಂದ ಹೊಸದುರ್ಗ, ಕಡೂರು, ಚಿಕ್ಕಮಗಳೂರು, ತರೀಕೆರೆ ತಾಲೂಕು ಸೇರಿದಂತೆ ಬಯಲು ಸೀಮೆಯ ಹಳ್ಳಿಗಳಿಗೆ ನಿತ್ಯ 30  ಕ್ಯುಸೆಕ್‌ನಂತೆ ವರ್ಷವಿಡೀ ಕುಡಿಯುವ ನೀರು ಕೊಡಲು 1 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟರು.
Read also : Davangere | ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು : ಡಿಸಿ
ಕೂಡಲೇ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲೆಯ ಎಲ್ಲಾ ಶಾಸಕರು, ಭದ್ರಾ ಬಲದಂಡೆ ಅಚ್ಚುಕಟ್ಟು ಪ್ರದೇಶದ ರೈತ ಮುಖಂಡರ ಸಭೆ ಕರೆದು ಈ ಭಾಗದ ರೈತರಿಗೆ ನ್ಯಾಯ ಒದಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಶಾಸಕರ ಮನವಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೂಡಲೇ ಆ ಭಾಗದ ಸಚಿವರು, ಶಾಸಕರು,ರೈತ ಮುಖಂಡರೊಂದಿಗೆ ಸಭೆ ಆಯೋಜನೆ ಮಾಡಲು ಸಂಬಂಧಪಟ್ಟ  ಜಲಸಂಪನ್ಮೂಲ ಸಚಿವರಿಗೆ ಸೂಚಿಸುವುದಾಗಿ ತಿಳಿಸಿದರು.
ಅದೇ ರೀತಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಸಲ್ಲಿಸಿ ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಗೊಳಿಸಿ ಬೇರೆ ಮಾರ್ಗದಿಂದ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೂಡಲೇ ರೈತ ಮುಖಂಡರ ಸಭೆ ಕರೆಯುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ರೈತ ಮುಖಂಡರಾದ ರಾಮಗೊಂಡನಹಳ್ಳಿ ಶರಣಪ್ಪ, ಮಲ್ಲಿಕಾರ್ಜುನ್, ಅತ್ತಿಗೆರೆ ಮಹಾದೇವಪ್ಪ, ಬಾಡದ ರವಿ ಸೇರಿದಂತೆ ಇನ್ನಿತರರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davangere | ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು : ಡಿಸಿ
Next Article Davanagere ದಾವಣಗೆರೆ | ಬೀದಿ ಬದಿ ವ್ಯಾಪಾರ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ-ತಪಾಸಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  : ಪ್ರಸಕ್ತ ಸಾಲಿನ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ…

By Dinamaana Kannada News

ಸಮಾಜ ಸೇವೆ ಗುರುತಿಸಿ ಲಿಯಾಖತ್ ಆಲಿ ಎಂ.ಕೆ ಅವರಿಗೆ ಸನ್ಮಾನ

ದಾವಣಗೆರೆ : ನಗರದ ಜಿಲ್ಲಾಕ್ರೀಡಾಂಗಣದಲ್ಲಿ ದಾವಣಗೆರೆ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ   ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲಿಯಾಖತ್ ಆಲಿ ಎಂ.ಕೆ…

By Dinamaana Kannada News

ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್

ದಾವಣಗೆರೆ .07: ದೇಶದಾದ್ಯಂತ ಇದೇ ನವೆಂಬರ್ 9 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ದಿನದ ಅಂಗವಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?