ದಾವಣಗೆರೆ ಸೆ.1 : ಬಡ ಮಕ್ಕಳಿಗೆ ಕ್ರೀಡೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯ ನೇಮಕಾತಿಯಲ್ಲಿ ಹೆಚ್ಚಿನ ಮೀಸಲಾತಿಯನ್ನು ನೀಡಬೇಕೆಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಹೇಳಿದರು.
ಸೋಮವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯ ಪ್ರಾಮುಖ್ಯತೆಯು ಇದೆ, ಜೊತೆಗೆ ಹೆಚ್ಚಿನ ಶಿಕ್ಷಣದ ಅವಶ್ಯಕತೆ ಇದೆನೀ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಸಹಾಯಧನ ಬಿಡುಗಡೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿ ಪ್ರಯತ್ನ ಮಾಡಲಾಗುತ್ತದೆ. ಕ್ರೀಡೆಗಳಲ್ಲಿ ಅತೀ ಹೆಚ್ಚು ಬಡಮಕ್ಕಳು ಭಾಗವಹಿಸುವವರು, ಅವರಿಗೆ ಹೆಚ್ಚು ಮಹತ್ವ ನೀಡಬೇಕು. ಮಕ್ಕಳು ಮತ್ತು ಯುವಜನರ ಕ್ರೀಡಾಸಕ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಸರ್ಕಾರದಿಂದ ಹಮ್ಮಿಕೊಳ್ಳಲಾಗಿದೆ. ಸರ್ಕಾರವು ಸಾಕಷ್ಟು ಅನುದಾನ ನೀಡುವ ಮೂಲಕ ಹೆಚ್ಚಿನ ಪೋತ್ಸಾಹ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದರು.
Read also : ಜಾತಿ, ಧರ್ಮ ಮೀರಿ ಬೆಳೆಯಬೇಕಾದರೆ ಉನ್ನತ ಹುದ್ದೆ ಗಳಿಸಬೇಕು : ಜಿ. ಬಿ. ವಿನಯ್ ಕುಮಾರ್
ಹರಿಹರ ಶಾಸಕರಾದ ಬಿ.ಪಿ.ಹರೀಶ್ ಮಾತನಾಡಿ ಮಕ್ಕಳು ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ ಬರಲಿದೆಲಿದೆ. ಒಂದು ಕಾಲದಲ್ಲಿ ಕ್ರೀಡೆಗೆ ಅಷ್ಟು ಮಹತ್ವ ಇರಲಿಲ್ಲ, ಈಗ ಕಾಲ ಬದಲಾಗಿದೆ ಎಂದರು. ಆಟಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸೋಲೇ ಗೆಲುವಿನ ಮೆಟ್ಟಿಲು ಅಂದುಕೊಂಡು ಸ್ಪರ್ಧಾ ಮನೋಭಾವನೆಯಿಂದ ಆಟಗಳನ್ನು ಆಡಬೇಕು ಎಂದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಪಟುಗಳ ಪರಿಚಯ ಮಾಡಿಕೊಂಡು ಪ್ರೋತ್ಸಾಹಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರ್ಷ ಉಪಸ್ಥಿತರಿದ್ದರು.