Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

Dinamaana Kannada News
Last updated: December 10, 2025 12:29 pm
Dinamaana Kannada News
Share
Davanagere
SHARE
ದಾವಣಗೆರೆ/ನವದೆಹಲಿ: ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು  ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ  ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕರ್ನಾಟಕದ ಸಂಸದರ ನಿಯೋಗ ತೆರಳಿ ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಅವರ ಮನವಿಯನ್ನು  ಪರಿಗಣಿಸುವಂತೆ ಈ‌ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ಉಲ್ಲೇಖಿಸಿದ್ದಾರೆ.
ಕೇಂದ್ರ ಸರ್ಕಾರದ  ವಿಳಂಬದ ಪರಿಣಾಮವಾಗಿ ಕರ್ನಾಟಕದ ತೊಗರಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಪ್ರಸ್ತುತ ಖಾರೀಫ್‌ ಹಂಗಾಮು 2025–26 ರಲ್ಲಿ, ಕರ್ನಾಟಕದಲ್ಲಿ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಬಿತ್ತನೆಗೊಂಡಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚಿನ ಉತ್ಪಾದನೆಯ ನಿರೀಕ್ಷೆಯಿದೆ. ಈ ಬೆಳೆ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಪ್ರಮುಖ ಜಿಲ್ಲೆಗಳ ಲಕ್ಷಾಂತರ ರೈತರಿಗೆ ಆರ್ಥಿಕ ಬೆನ್ನೆಲುಬಾಗಿದೆ ಎಂದು ಕೇಂದ್ರ ಸಚಿವರ ಗಮನಸೆಳೆದರು.
ಪ್ರಸ್ತುತ ಮಾರುಕಟ್ಟೆಯ  ಬೆಲೆ ಕ್ವಿಂಟಾಲ್‌ಗೆ ₹5,830ರಿಂದ ₹6,700ರ ನಡುವೆ ಇದೆ. ಆದರೆ 2025–26ರ ತೊಗರಿಬೆಳೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ಸುಮಾರು ₹8,000. ಬೆಳೆಯ ಆಗಮನದ ಗರಿಷ್ಠ ಅವಧಿ ಡಿಸೆಂಬರ್ 2025–ಜನವರಿ 2026ರೊಳಗೆ ಶುರುವಾಗಲಿದ್ದು, ಖರೀದಿ ಕೇಂದ್ರಗಳನ್ನು ಕೇಂದ್ರ ಸರ್ಕಾರ ಫೆಬ್ರವರಿ,ಮಾರ್ಚ್ ತಿಂಗಳಲ್ಲಿ ಮಾತ್ರ ಆರಂಭಿಸಲು ನಿರ್ಧರಿಸಿದೆ.
Read also : ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಇದರಿಂದಾಗಿ ರೈತರು ತೀವ್ರ ಆದಾಯ ನಷ್ಟದ ಅಪಾಯವನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆ ಬೆಲೆ ಎಂಎಸ್ ಪಿ ಗಿಂತ ಕಡಿಮೆಯಾಗುವಾಗ, ಅದು ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಅದು ರೈತ ಮತ್ತು ಸರ್ಕಾರದ ನಡುವಿನ ನಂಬಿಕೆಯ ಪ್ರಶ್ನೆಯಾಗಿದೆ. ಸರ್ಕಾರ ನೀಡಿದ ಎಂಎಸ್ ಪಿ ಭರವಸೆಯನ್ನು ನಂಬಿ ರೈತರು  ಬಿತ್ತಿರುತ್ತಾರೆ. ಪ್ರತಿಯೊಂದು ವಿಳಂಬದ ದಿನವೂ ಕರ್ನಾಟಕದ ರೈತರನ್ನು ಬಲವಂತದ ನಷ್ಟದಲ್ಲಿ ಮಾರಾಟಕ್ಕೆ, ಸಾಲದ ಬಲೆಗೆ ಮತ್ತು ಶಾಶ್ವತ ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ, 2025ರ ನವೆಂಬರ್‌ 6ರಂದು ಕರ್ನಾಟಕ ಸರ್ಕಾರವು ತೊಗರಿಬೇಳೆಗೆ ತಕ್ಷಣದ MSP ಖರೀದಿಗೆ ಸಂಬಂಧಿಸಿದಂತೆ NAFED ಮತ್ತು NCCF ಮುಖಾಂತರ ಖರೀದಿ ಪ್ರಕ್ರಿಯೆ ಆರಂಭಿಸಲು ಅಧಿಕೃತ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಮಾರುಕಟ್ಟೆಗೆ ಬೆಳೆ ಬರುವ ಹಂತಕ್ಕೆ ತಲುಪುತ್ತಿರುವುದರೂ, ಈವರೆಗೆ ಕೇಂದ್ರದಿಂದ ಯಾವುದೇ ಅನುಮೋದನೆ ಲಭಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಖರೀದಿ ವಿಳಂಬದಿಂದ ಉಂಟಾಗುವ ಹಾನಿ ಒಂದು ಹಂಗಾಮಿನಷ್ಟಕ್ಕೆ ಸೀಮಿತವಲ್ಲ. ಇದು ಸಾರ್ವಜನಿಕ ಸಂಸ್ಥೆಗಳ ಮೇಲಿನ ಅವರ ನಂಬಿಕೆಯ ಪ್ರಶ್ನೆಯಾಗಿದೆ. ಆದ್ದರಿಂದ ಕರ್ನಾಟಕದ ರೈತರಿಗೆ ನೆರವಾಗುವಂತೆ ಕೇಂದ್ರ ಸರ್ಕಾರವೇ ಘೋಷಿಸಿರುವ ಎಂಎಸ್ ಪಿಯನ್ನು ಸಮಯಕ್ಕೆ ಸರಿಯಾಗಿ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.
ನಿಯೋಗದಲ್ಲಿ ಸಂಸದರುಗಳಾದ  ಜಿ.ಕುಮಾರ್ ನಾಯಕ್, ಇ.ತುಕಾರಾಂ, ಶ್ರೇಯಸ್ ಪಟೇಲ್, ಸುನೀಲ್ ಬೋಸ್, ಸಾಗರ್ ಖಂಡ್ರೆ ಅವರುಗಳು‌ ಉಪಸ್ಥಿತರಿದ್ದರು.
ರಾಷ್ಟ್ರದ ಆಹಾರ ಭದ್ರತೆಯಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ. ಬರ, ಪ್ರವಾಹ, ಆರ್ಥಿಕ ಆಘಾತ ಯಾವ ಸಂದರ್ಭದಲ್ಲೂ ನಮ್ಮ ರೈತರು ದೇಶವನ್ನು ನಿರಾಶ್ರಿತರನ್ನಾಗಿಲ್ಲ. ಈಗ ದೇಶವು ಅವರೊಂದಿಗೆ ನಿಲ್ಲಬೇಕಾದ ಸಮಯವಾಗಿದೆ. ಈ ನಿರ್ಧಾರವು ಕೇವಲ ಆಡಳಿತಾತ್ಮಕ ವಿಷಯವಲ್ಲ.  ಇದು ಭಾರತದ ಅನ್ನದಾತರ ಮೇಲಿನ ನಮ್ಮ ನೈತಿಕ ಬದ್ಧತೆಯ ದೊಡ್ಡ ಪರೀಕ್ಷೆ. ರೈತರ ಹಿತ, ರಾಜ್ಯ, ಕೇಂದ್ರ ಸಹಕಾರ ಮತ್ತು ರಾಷ್ಟ್ರೀಯ ಆಹಾರ ಭದ್ರತೆಯ ದೃಷ್ಟಿಯಿಂದ, ಕೇಂದ್ರ ಸರ್ಕಾರದಿಂದ ತಕ್ಷಣದ ಮತ್ತು ದೃಢವಾದ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕದ ಕಾಂಗ್ರೆಸ್ ಸಂಸದರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere theft news : 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ದಾವಣಗೆರೆ  (Davanagere) ; ಹಗಲು ವೇಳೆ ಮನೆಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ ಆರೋಪಿಯಿಂದ 1,67,000/-ರೂ…

By Dinamaana Kannada News

ಕಳಪೆ ಕಾಮಗಾರಿ : ಇಂಜಿನಿಯರ್ ವಿರುದ್ಧ ಶಾಸಕ ಬಸವಂತಪ್ಪ ಗರಂ

ದಾವಣಗೆರೆ: ನೀವು ಮಾಡುತ್ತಿರುವ ಕಾಮಗಾರಿ ನೋಡಿದರೆ, ರಸ್ತೆ ಕಾಮಗಾರಿ ನಡೆಸಿದ ಕೆಲವೇ ತಿಂಗಳಲ್ಲಿ ಡಾಂಬರ್ ಕಿತ್ತುಹೋಗಿ, ತಗ್ಗು–ಗುಂಡಿಗಳು ಬಿದ್ದು ಮತ್ತೆ…

By Dinamaana Kannada News

Bangalore | ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು (Bangalore) : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?