ದಾವಣಗೆರೆ.ಅ.17 (Davanagere ); ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲು ಹಾಗೂ ತುರ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನಿರ್ದೇಶನ ನೀಡಿದ್ದಾರೆ.
ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಕೂಡ ಎಡೆಬಿಡದೆ ಮಳೆಯಾಗುತ್ತಿದೆ. ನದಿ ಪಾತ್ರದಲ್ಲಿರುವ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಸಂಸದರು ಸೂಚನೆ ನೀಡಿದ್ದಾರೆ.
ಮಳೆಯಿಂದ ಮನೆ ಕುಸಿದು ಸಂಕಷ್ಟದಲ್ಲಿರುವ ಜನರ ರಕ್ಷಣೆ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
Read also : Harihara | ಹರಿಹರ ಜಿಟಿಟಿಸಿ ಕೇಂದ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ