Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ
ತಾಜಾ ಸುದ್ದಿ

ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Dinamaana Kannada News
Last updated: January 23, 2026 3:03 am
Dinamaana Kannada News
Share
Davanagere
SHARE

ದಾವಣಗೆರೆ :ಕುಂದವಾಡ ಕೆರೆಯು ದಾವಣಗೆರೆಯ ಹೃದಯ ಭಾಗವಾಗಿದ್ದು, ಅತ್ಯಂತ ಸುಂದರ ಮತ್ತು ಆರೋಗ್ಯಕರ ವಾಯುವಿಹಾರಕ್ಕೆ ಕೆರೆ ತುಂಬಾ ಉಪಯುಕ್ತವಾದ ಸ್ಥಳವಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ನಗರದ ಕುಂದವಾಡ ಕೆರೆಯಲ್ಲಿ ಮಹಾನಗರ ಪಾಲಿಕೆ  ಹಾಗೂ ಎಸ್.ಎಸ್.ಕೇರ್ ಟ್ರಸ್ಟ್  ಇವರ ಸಹಯೋಗದಲ್ಲಿ  ನಗರದಲ್ಲಿ ಸ್ವಚ್ಚ ಭಾರತ ಅಭಿಯಾನ 2 ಎಸ್.ಬಿ.ಎಮ್ ಅಡಿಯಲ್ಲಿ ಸ್ವಚ್ಚ ಹಾಗೂ ಆರೋಗ್ಯ ಕರ ದಾವಣಗೆರೆಗಾಗಿ ಜನಜಾಗೃತಿ ಮೂಡಿಸಲು ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನಮ್ಮ ದಾವಣಗೆರೆ ನಗರವು ಸ್ವಚ್ಚ ಸರ್ವೇಕ್ಷಣೆ-2024 ರಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ, ದೇಶದಲ್ಲಿ 32ನೇ ಸ್ಥಾನ ಪಡೆದಿರುವುದು, ಅತ್ಯಂತ ಹೆಮ್ಮೆಯ ವಿಷಯ. ಕುಂದವಾಡ ಕೆರೆಯ ಗ್ಲಾಸ್‌ಹೌಸ್ ಪ್ರವೇಶ ಧ್ವಾರದ ಬಳಿ ಬಹುದಿನಗಳ ಜನಗಳ ಬೇಡಿಕೆ ಇದ್ದ ಸುಸರ್ಜಿತ ಶೌಚಾಲಯ ನಿರ್ಮಿಸಲು ಶಂಕುಸ್ಥಾಪನೆ ಮಾಡಿ ಮಾತನಾಡಿ, ನಾವು ದೇಶದಲ್ಲಿ ಮೊದಲನೇ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿ ಸಬೇಕು. ನಮ್ಮ ಎಸ್.ಎಸ್.ಕೇರ್ ಟ್ರಸ್ಟ್ ಮತ್ತು ಬಾಪೂಜಿ ವಿದ್ಯಾಸಂಸ್ಥೆಯ 9 ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪಾಲಿಕೆ ಜೊತೆಗೂಡಿ ಕುಂದವಾಡ ಕೆರೆಯನ್ನು ಸ್ವಚ್ಚತೆಗೊಳಿಸಿದ್ದಾರೆ. ಎಲ್ಲಾ ಮುಖ್ಯಸ್ಥ ರಿಗೂ ಹಾಗೂ ವಿದ್ಯಾರ್ಥಿಗಳ ಮೆಚ್ಚುವ ಕಾರ್ಯ ಇದಾಗಿದೆ.  ಇದೇ ರೀತಿ ಪ್ರತಿ ತಿಂಗಳಿಗೆ ಒಮ್ಮೆ ಸ್ವಚ್ಚತಾ ಕಾರ್ಯಕ್ರಮವನ್ನು ಮುಂದುವರೆಸಿ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಾಲಿಕೆಯ ಆಯುಕ್ತರಾದ ರೇಣುಕಾ ಸ್ವಚ್ಚ ಭಾರತ ಅಭಿಯಾನ 2.0 ರಡಿ ಐ.ಇ.ಸಿ. ಅಡಿಯಲ್ಲಿ ನಾವು ನಗರದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮವನ್ನು ಮಾಡುತ್ತಿದ್ದು, ಅದರಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ನ ಸಹಯೋಗದಲ್ಲಿ ಸುಮಾರು 4.5 ಕೀಲೋಮೀಟರ್ ಸುತ್ತಳತೆ ಇರುವ ಕುಂದವಾಡ ಕೆರೆಯ ಸ್ವಚ್ಚತೆ  ಮಾಡಲಾಗಿದೆ.   ಸ್ವಚ್ಚ ದಾವಣಗೆರೆ, ಸ್ವಚ್ಚ ಸುಂದರ ದಾವಣಗೆರೆ ನಿರ್ಮಾಣಕ್ಕಾಗಿ ನಾನು ಪಾಲಿಕೆಯೊಂದಿಗೆ ಕೈಜೋಡಿಸುತ್ತೇನೆ ಎಂದು ಸಹಿ ಸಂಗ್ರಹಣಾ ಅಭಿಯಾನದ ಫಲಕಕ್ಕೆ ಪರಿವರ್ತನಾ ಟ್ರಸ್ಟ್ನ ಮುಖ್ಯಸ್ಥರಾದ ಶಾಂತಭಟ್ ಅವರಿಂದ ಸಹಿ ಪಡೆಯುವ ಮೂಲಕ ಚಾಲನೆ ನೀಡಲಾಯಿತು.

Read also : ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ತಡೆಗೆ ಒತ್ತಾಯ

ಪರಿಸರ ಅಭಿಯಂತರಾದ ಬಸವಣ್ಣ ಅವರು ಸ್ವಚ್ಚತಾ  ಪ್ರತಿಜ್ಞೆವಿಧಿ ಭೋದಿಸಿದರು. ನಂತರ ಪಾಲಿಕೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದಂತಹ ಪೌರಕಾರ್ಮಿಕರನ್ನು ಮತ್ತು ಆರೋಗ್ಯ ನಿರೀಕ್ಷಕರಿಗೆ ಕೈ ಗಡಿಯಾರ ವಿತರಿಸಿ ಅವರನ್ನು ಸನ್ಮಾನಿಸಿದರು.

ಸ್ವಚ್ಚತೆ ಕಾರ್ಯಕ್ರಮದಲ್ಲಿ ತೊಡಗಿದ 9 ಕಾಲೇಜಿನ ವಿದ್ಯಾರ್ಥಿಗಳಿಗೂ ಉತ್ತಮ ಕಾರ್ಯನಿರ್ವಹಿಸಿದ ಕಾಲೇಜಿಗೆ ಬಹುಮಾನ ವಿತರಿಸಿದರು.

ಕಾರ್ಯಪಾಲಕ ಅಭಿಯಂತರಾದ ಉದಯಕುಮಾರ, ಕಿರಿಯ ಆರೋಗ್ಯ ನಿರೀಕ್ಷಕರು ಮಲ್ಲಿಕಾ,  ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ, ಕುಂದವಾಡ ಕೆರೆಯ ವಾಯುವಿಹಾರಿಗಳ ಸಂಘದ ಮುಖ್ಯಸ್ಥರು, ಸದಸ್ಯರು, ಮತ್ತು ಕಾರ್ಯಕ್ರಮ ಆಯೋಜಿಸಿದ ವಾಹಿನಿ ಅಭಿವೃದ್ದಿ ಸಂಸ್ಥೆಯ ಸದಸ್ಯರು, ಮಹಾನಗರ ಪಾಲಿಕೆಯ ಅಧಿಕಾರಿ ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಹಾಜರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ತಡೆಗೆ ಒತ್ತಾಯ
Next Article Davanagere ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮೀನು ಮಾರಾಟಗಾರರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ…

By Dinamaana Kannada News

Davanagere | ಕರ್ನಾಟಕ ಪೊಲೀಸರು ದೇಶಕ್ಕೆ ಮಾದರಿ : ಸುರೇಶ್ ಬಿ.ಇಟ್ನಾಳ್

ದಾವಣಗೆರೆ  (Davanagere) : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲಿಯೇ ಮಾದರಿಯಾಗಿದ್ದಾರೆಎಂದು ಜಿಪಂ ಸಿಇಒ ಸುರೇಶ್…

By Dinamaana Kannada News

ಕಳಪೆ ಗುಣಮಟ್ಟದ ಆಹಾರ ಪದಾರ್ಥ ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಕೆಂಡಾಮಂಡಲ

ದಾವಣಗೆರೆ:  ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಂದ ಅಡುಗೆ ಮಾಡಿ ಮಕ್ಕಳಿಗೆ ಬಡಿಸಿದರೆ ಮಕ್ಕಳ ಆರೋಗ್ಯದ ಸ್ಥಿತಿ ಹದಗೆಡುತ್ತದೆ ಎಂದು ಶಾಸಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?