ದಾವಣಗೆರೆ : ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕಡ್ಡಾಯವಾಗಿ ನಾಡಗೀತೆಯನ್ನು ಪೂರ್ಣ ಪ್ರಮಾಣದಲ್ಲಿ ಮಕ್ಕಳಿಂದ ಹಾಡಿಸಬೇಕು, ಎಲ್ಲಾ ಅನುದಾನಿತ ಹಾಗೂ ಅನುದಾನಿತ ರಹಿತ ಶಾಲಾ ಮಕ್ಕಳ ವಾಹನಗಳ ಮೇಲೆ ಕನ್ನಡದಲ್ಲಿ ನಾಮಫಲಕ ಹಾಕುವುದು, ಶಾಲೆಗಳ ನಾಮಫಲಕಗಳು ಕನ್ನಡದಲ್ಲಿ ಇರತಕ್ಕದ್ದು ಹಾಗೂ ಶಾಲಾ ಶುಲ್ಕ ವಿವರಗಳ ಬಗ್ಗೆ ಶಾಲೆಯ ಪ್ರವೇಶದ್ವಾರದಲ್ಲಿ ದೊಡ್ಡದಾಗಿ ನಾಮಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸುವುದು, ಪ್ರತಿಯೊಬ್ಬ ಮಗುವು ಕನ್ನಡವನ್ನು ಕಡ್ಡಾಯವಾಗಿ ಓದುವುದು, ಬರೆಯುವುದನ್ನು ರೂಡಿಸುವುದು, ಶಾಲಾ ಆವರಣದಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವಂತೆ ನೋಡಿಕೊಳ್ಳವುದು, ಕನ್ನಡ ಭಾಷೆ ಸಂಸ್ಕೃತಿ ಬಗ್ಗೆ ಗೌರವ ಹೆಚ್ಚಿಸುವ ಅಭಿಮಾನ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೊಟ್ರೇಶ್ ತಿಳಿಸಿದ್ದಾರೆ.
Read also : ರೈತರಿಂದ 87258 ಕ್ವಿಂಟಲ್ ಮೆಕ್ಕೆಜೋಳ ಖರೀದಿ,ನೊಂದಣಿಗೆ ಫೆ.13 ರವರೆಗೆ ಅವಕಾಶ
