ದಾವಣಗೆರೆ (Davanagere) : ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ; ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ; ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.
Read also : Davanagere | ಪ. ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಕಸಬಾ ಮೊ.ನಂ 9686334350, ಆನಗೋಡು ರೈತ ಸಂಪರ್ಕ ಕೇಂದ್ರ 7019819101, ಮಾಯಕೊಂಡ ರೈತ ಸಂಪರ್ಕ ಕೇಂದ್ರ ಮಾಯಕೊಂಡ ಮೊ. ನಂ.6364642155. 8722551293 ಅಥವಾ ದಾವಣಗೆರೆಯಲ್ಲಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಯನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.