Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವಾರ್ತಾ ಇಲಾಖೆ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | ವಾರ್ತಾ ಇಲಾಖೆ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: November 4, 2024 12:30 pm
Dinamaana Kannada News
Share
Davanagere
Davanagere
SHARE

ದಾವಣಗೆರೆ.ನ. 04( Davanagere) : ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 5 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ  ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಸ್ಟೈಫೆಂಡ್ ನೀಡಲಾಗುವುದು. ತರಬೇತಿಯು 2025ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read also : Davanagere | ಕನ್ನಡದಲ್ಲಿ ವ್ಯವಹರಿಸಿ : ಸಂತೋಷ ಕುಮಾರ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಕನ್ನಡದಲ್ಲಿ ವ್ಯವಹರಿಸಿ : ಸಂತೋಷ ಕುಮಾರ್
Next Article Davanagere Davanagere | ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ

ದಾವಣಗೆರೆ (Davanagere) :  ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಧೃಡಗೊಳ್ಳವ ಕಡೆಗೆ ಗಮನಹರಿಸಬೇಕೆ ಹೊರತು ಪ್ರತಿ ಸ್ಪರ್ಧಿಯನ್ನು ಸೋಲಿಸುವ ತಂತ್ರದಕಡೆಗಲ್ಲ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು,…

By Dinamaana Kannada News

ಗಿಡ ನೆಡೋಣ ಬನ್ನಿ ಕಾರ್ಯಕ್ರಮ

ಹರಿಹರ:  ಪರಿಸರಕ್ಕಾಗಿ ನಾವು ಒಕ್ಕೂಟ ಹಾಗೂ ದಾವಣಗೆರೆ ಜೈನ್ ಇಂಜಿನಿಯರಿಂಗ್ ಕಾಲೇಜಿನಿಂದ ಹರಿಹರ ಹೊರವಲಯದ ಜೋಡಿ ರಸ್ತೆಯಲ್ಲಿ ಬುಧವಾರ ವಿಶ್ವ…

By Dinamaana Kannada News

Education article | ಮಾತೃಭಾಷೆ ಆಧಾರಿತ ಶಿಕ್ಷಣದ ಅಗತ್ಯತೆ ಏನು?

ಜಗತ್ತಿನ ಭಾಷಾ ತಜ್ಞರು, ಮನೋವಿಜ್ಞಾನಿಗಳು,ಸಾಮಾಜಿಕ ಚಿಂತಕರು, ಮಗುವಿನ ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಸಿಗಬೇಕು ಎಂದು ಪ್ರತಿಪಾದಿಸಿದ್ದಾರೆ. ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡಿದಾಗ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?