ದಾವಣಗೆರೆ ಜು.15 : ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange ) ಸಂಸ್ಥೆಯು, ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ.ಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.
ಈ ವಿದ್ಯಾರ್ಹತೆ ಹೊಂದಿರುವ ನಸಿರ್ಂಗ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಲಿದೆ. ಈ ಸಂಸ್ಥೆಯ ವತಿಯಿಂದ ಊಟದ ವ್ಯವಸ್ಥೆ ಹಾಗೂ ಉಚಿತ ವಸತಿ ಸೌಲಭ್ಯ ನೀಡುವುದಲ್ಲದೇ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಒದಗಿಸಲಾಗುವುದು.
ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದವರು ಈಗಾಗಲೇ ನಸಿರ್ಂಗ್ ಪೂರ್ಣಗೊಳಿಸಿದ ಉದ್ಯೋಗಾಂಕ್ಷಿಗಳು ಕಾರ್ಮಿಕ ಅಧಿಕಾರಿಗಳ ಕಚೇರಿ, ಬಿ.ಎಸ್.ಎನ್.ಎಲ್ ಆಫೀಸ್ 2ನೇ ಮಹಡಿ, ಶ್ರೀ ಡಿ. ದೇವರಾಜ ಅರಸು ಬಡಾವಣೆ, ಸಂಗೊಳ್ಳಿ ರಾಯಣ್ಣ ವೃತ್ತ, ಪಿ.ಬಿ ರೋಡ್ ದಾವಣಗೆರೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಗಳ ಕಚೇರಿಯ ದೂ.ಸಂ:08192-237332 ಸಂಪರ್ಕಿಬೇಕೆಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.