ದಾವಣಗೆರೆ : ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಒಕ್ಕಲಿಗ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್. ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್‌ಸೈಟ್ http://kvcdc.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆಯದಿನವಾಗಿರುತ್ತದೆ.
Read also : ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ
ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಮತ್ತು 6363564821 ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
