ದಾವಣಗೆರೆ (Davanagere): ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಜನರ ಮೇಲೆ ಹೇರಲು ಹೊರಟಿದೆ. ಇಂತಹದ್ದೊAದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆನಡೆಸಬೇಕಾಗಿತ್ತು.ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಅಗಾಗ ಇಂತಹ ಗಿಮಿಕ್‌ಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
Read also : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ : ಡಿಸಿ