ದಾವಣಗೆರೆ (Davanagere): ಜನರಿಗೆ ಅನಗತ್ಯವಾಗಿ ತೊಂದರೆ ನೀಡಿದರೆ ಹಾಗೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ರೌಡಿಶೀಟರ್‌ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಡಿಆರ್ ಮೈದಾನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು.
ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ 150ಕ್ಕೂ ಹೆಚ್ಚು ರೌಡಿಶೀಟರ್‌ಗಳು ಪರೇಡ್‌ನಲ್ಲಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ, ಜನರಿಗೆ ತೊಂದರೆ ಕೊಡುವಂತಹ ಕೆಲಸಗಳಿಗೆ ಕೈ ಹಾಕಬೇಡಿ. ರೌಡಿಶೀಟರ್‌ಗಳ ಮೇಲೆ ನಿಗಾ ಇರಿಸಲು ಈ ಪರೇಡ್ ಮಾಡಿದ್ದೇವೆ. ಅಪರಾಧದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದೇವೆ. ಕೆಲವರು ಅಪರಾಧ ಕೆಲಸಬಿಟ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಂತಹವರ ಕೇಸ್‌ಗಳನ್ನು ಮುಚ್ಚುತ್ತೇವೆ. ಯಾರು ಅಪರಾಧ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದಾರೋ, ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇವೆ. ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದೇವೆ. ಅಲ್ಲದೇ ಮತೀಯ ಗಲಭೆಗಳಲ್ಲಿ ಭಾಗಿಯಾದವರೂ ಕೂಡ ಪರೇಡ್‌ಗೆ ಹಾಜರಾಗಿದ್ದರು. ನೈತಿಕ ಪೊಲೀಸ್‌ಗಿರಿ ಮಾಡದಂತೆ ನಿಗಾ ವಹಿಸಿದ್ದೇವೆ ಎಂದರು.
Read also : ವಿಶ್ವಪರಿಸರ ದಿನಾಚರಣೆ |ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧತೆಗೆ ಆದ್ಯತೆ ಇರಲಿ
ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕೇಸು ದಾಖಲಾಗಿದೆ. ಕೋಪಕ್ಕೆ ಬುದ್ದಿ ಕೊಡಬೇಡಿ, ಸಮಾಜದಲ್ಲಿ ಕಾನೂನು ಪ್ರಕಾರ ಜೀವನ ನಡೆಸಿ ಎಂದು ಸಲಹೆ ನೀಡಿದರು.
ಜೆ.ಎನ್.ಶ್ರೀನಿವಾಸ್ ಅಲಿಯಾಸ್ ಮೋಟ್ ಬಳ್ಳು ಸೀನಾ ಕೂಡ ಈ ಪರೇಡ್‌ನಲ್ಲಿ ಭಾಗವಹಿಸಿದ್ದರು.