ದಾವಣಗೆರೆ (Davanagere) : ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ. ಇದು ಸೌಮ್ಯ ಸ್ವಭಾವದ ಸೋಂಕು ಆಗಿರುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿರುತ್ತಾರೆ. ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ವ್ಯವಸ್ಥೆ, ಅತ್ಯವಶ್ಯಕ ಔಷಧಿಗಳು, ಐ.ಸಿ.ಯು ಮುಂತಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.
Read also : Davanagere | ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ತೀವ್ರ ತರಹದ ಶ್ವಾಸಕೋಶದ ಸೋಂಕು ಇರುವ ರೋಗಿಗಳು, 60 ವರ್ಷ ಮೇಲ್ಪಟ್ಟ ಮತ್ತು ಇತರೆ ಧೀರ್ಘಕಾಲಿನ ಕಾಯಿಲೆಗಳು ಇರುವ ವ್ಯಕ್ತಿಗಳು 1 ವರ್ಷದ ಒಳಗಿನ ಮಕ್ಕಳು ಹಾಗೂ ಲಕ್ಷಣಗಳು ಇರುವ ಗರ್ಭಿಣಿಯರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕು. ಶೀತ, ಜ್ವರ, ಕೆಮ್ಮು ಈ ತರಹದ ಲಕ್ಷಣಗಳು ಇದ್ದಲ್ಲಿ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸಲು ಮತ್ತು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಗತ್ಯ ತಪಾಸಣೆ ಮತ್ತು ಔಷಧೋಪಚಾರ ಪಡೆಯುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.