Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ
ತಾಜಾ ಸುದ್ದಿ

ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಗಳ ಸಮನ್ವಯ ಅಗತ್ಯ : ಅಪರ್ಣ ಕೊಳ್ಳ

Dinamaana Kannada News
Last updated: February 27, 2026 12:34 pm
Dinamaana Kannada News
Share
Davanagere
SHARE

ದಾವಣಗೆರೆ, ಫೆ.27: ಮಕ್ಕಳ ಶಿಕ್ಷಣ, ರಕ್ಷಣೆ ಮತ್ತು ಅವರ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ.ಕೊಳ್ಳ ಕರೆ ನೀಡಿದರು.

ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಭಾಗೀದಾರರ ಇಲಾಖಾ ಅಧಿಕಾರಿಗಳಿಗೆ ವಿಶೇಷ ಅರಿವು ಕಾರ್ಯಕ್ರಮ’ ಉದ್ಪಾಟಿಸಿ ಅವರು ಮಾತನಾಡಿದರು.

ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬAಧಿಸಿದAತೆ ಇಲಾಖೆಗಳ ನಡುವೆ ಹೆಚ್ಚಿನ ಸಮನ್ವಯತೆಯ ಅಗತ್ಯವಿದೆ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶಾಲೆಗಳಿಗೆ ರಜೆ ಇರುವ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುವುದರಿಂದ, ಈ ಅವಧಿಯಲ್ಲಿ ಬಾಲ್ಯವಿವಾಹ ತಡೆಗಟ್ಟಲು ಎಲ್ಲಾ ಇಲಾಖೆಗಳು ಹೆಚ್ಚಿನ ನಿಗಾವಹಿಸಬೇಕು. ಪ್ರಸಕ್ತ ಸಾಲಿನಲ್ಲಿ ದಾಖಲಾದ ಹೆಚ್ಚಿನ ಪ್ರಕರಣಗಳು ತಡೆಹಿಡಿಯಲ್ಪಟ್ಟಿರುವುದು ಆಶಾದಾಯಕವಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದ ಅಂಕಿಅAಶಗಳ ಪ್ರಕಾರ, ಪ್ರತಿದಿನ ಸರಾಸರಿ 12 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ. ದಾವಣಗೆರೆ ಜಿಲ್ಲೆಯಲ್ಲಿ ನವೆಂಬರ್ ಅಂತ್ಯದವರೆಗೆ ಸುಮಾರು 154 ಪ್ರಕರಣಗಳು ದಾಖಲಾಗಿವೆ. ದಾಖಲಾಗುತ್ತಿರುವ ಪೋಕ್ಸೋ ಪ್ರಕರಣಗಳಲ್ಲಿ ಶೇ. 70 ರಿಂದ 80 ರಷ್ಟು ಪ್ರಕರಣಗಳು ಪ್ರೇಮ ಸಂಬAಧಿತ ಪ್ರಕರಣಗಳಾಗಿವೆ. ಇವುಗಳನ್ನು ತಡೆಗಟ್ಟಲು ಶಿಕ್ಷಣ ಇಲಾಖೆಯ ಪಾತ್ರ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ‘ಶಿಕ್ಷಣದೊಂದಿಗೆ ರಕ್ಷಣೆ’ ಅತ್ಯಗತ್ಯವಾಗಿದೆ, ಪ್ರಸ್ತುತ ಎದುರಾಗುತ್ತಿರುವ ಸವಾಲುಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಲಾ ದಾಖಲಾತಿ ಮತ್ತು ಪರೀಕ್ಷೆಗೆ ಹಾಜರಾಗುವ ಮಕ್ಕಳ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಮಯದಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಶಿಕ್ಷಣ ಇಲಾಖೆಯ ಆದ್ಯತೆಯಾಗಬೇಕು ಎಂದರು.

ಹಾಸ್ಟೆಲ್‌ಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಬೇಕು, ಮಕ್ಕಳು ಮತ್ತು ಪೋಷಕರಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಾಹಿತಿ ನೀಡಲು ‘ಸಂವಾದ’ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು . ಶಿಕ್ಷಕರು ಮಕ್ಕಳ ನಡವಳಿಕೆಯಲ್ಲಿನ ಬದಲಾವಣೆಗಳನ್ನು ಗುರುತಿಸಿ ಕೂಡಲೇ ಸ್ಪಂದಿಸಬೇಕು. ಕೇವಲ ಪೊಲೀಸ್ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾತ್ರವಲ್ಲದೆ, ಶಿಕ್ಷಣ, ಸಮಾಜ ಕಲ್ಯಾಣ, ಆರ್‌ಡಿಪಿಆರ್ ಸೇರಿದಂತೆ ಒಟ್ಟು 10 ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸಾಧ್ಯ ಎಂದು ಅಭಿಪ್ರಾಯಿಸಿದರು.

Read also : ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ.ಕರೆಣ್ಣನವರ ಮಾತನಾಡಿ, ಮಕ್ಕಳು ದೇಶದ ಆಸ್ತಿ, ಅವರ ಆರೋಗ್ಯ ಮತ್ತು ಶಿಕ್ಷಣದ ವಿಷಯದಲ್ಲಿ ಯಾವುದೇ ರಾಜಿ ಸಲ್ಲದು, ಸರ್ಕಾರಿ ಸೌಲಭ್ಯಗಳು ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಸಾರ್ವಜನಿಕ ಸೇವೆಯಲ್ಲಿದ್ದೇನೆ ಎಂಬ ಅರಿವು ಹೊಂದಿರಬೇಕು. ಆದ್ದರಿಂದ ನಮ್ಮ ಕೆಲಸದಲ್ಲಿ ಪ್ರಾಮಾಣಿಕತೆ ಇರಲಿ, ಇತ್ತೀಚೆಗೆ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಹದಗೆಟ್ಟಿರುವ ಬಗ್ಗೆ ವರದಿಯಾಗುತ್ತಿದೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸಮರ್ಪಕವಾಗಿ ವಿತರಣೆಯಾಗಬೇಕು. ಈ ನಿಟ್ಟಿನಲ್ಲಿ ಅಂಗನವಾಡಿಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುವುದು ಅಗತ್ಯವಾಗಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಬಗ್ಗೆ ಅಧಿಕಾರಿಗಳು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಮತ್ತು ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಕೌಸರ್ ರೇಷ್ಮ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ್, ಡಿಡಿಪಿಐ ಕೊಟ್ರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಅಪರ್ಣ ಕೊಳ್ಳಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
Next Article Alur Ningaraj ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಿರ್ವಹಣೆ ಇಲ್ಲದ ಶುದ್ಧ ನೀರಿನ ಘಟಕ: ಶಾಸಕ ಕೆ.ಎಸ್.ಬಸವಂತಪ್ಪರಿಂದ ಅಧಿಕಾರಿಗಳಿಗೆ ತರಾಟೆ

ದಾವಣಗೆರೆ:   ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದರೂ ಗ್ರಾಮಸ್ಥರಿಗೆ…

By Dinamaana Kannada News

Davanagere news | ಎಸ್ಎಎಸ್ಎಸ್ ಯೋಗ ಕೇಂದ್ರದ ವಿದ್ಯಾರ್ಥಿಗಳು ಸಾಧನೆ

ದಾವಣಗೆರೆ (Davangere District) :  ಇತ್ತೀಚಿಗೆ ಚಿಕ್ಕಮಗಳೂರು (Chikmagalur District) ಜಿಲ್ಲೆ ಕಡೂರು ಪಟ್ಟಣದ ಪುಟ್ಟಮ್ಮ ಬೆಂಕಿ ಕಲ್ಯಾಣ ಮಂಟಪದಲ್ಲಿ…

By Dinamaana Kannada News

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಹರಿಹರ : ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ

By Dinamaana Kannada News
Alur Ningaraj
ತಾಜಾ ಸುದ್ದಿ

ಒಳಮೀಸಲಾತಿ|ಮಾದಿಗ ಸಮುದಾಯಕ್ಕೆ ಮರಣ ಶಾಸನ:ಆಲೂರು ನಿಂಗರಾಜ್ ಆಕ್ಷೇಪ

By Dinamaana Kannada News
Applications invited
ತಾಜಾ ಸುದ್ದಿ

ಪ.ಜಾತಿ,ಪ.ಪಂಗಡದ ಕೂಲಿ ಕಾರ್ಮಿಕರಿಂದ ಕುರಿ,ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಕಲ್ಯಾಣ ಮಂದಿರಗಳ “ಕಲ್ಯಾಣ”ಕಾರ್ಯ: ಡ್ರೈನೇಜ್ ಗೆ ಆಹಾರ ಪದಾರ್ಥ,ಸಾರ್ವಜನಿಕರ ಆಕ್ರೋಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?