ದಾವಣಗೆರೆ (Davanagere): ಕೊಲೆ ಪ್ರಕರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ತಡೆ ನಿಟ್ಟಿನಲ್ಲಿ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸರು ಗುರುವಾರ ನಸುಕಿನ ಜಾವ ರೌಡಿಶೀಟರ್‌ಗಳ ಮನೆಗಳಿಗೆ ದಿಢೀರನೆ ಭೇಟಿ ನೀಡಿ ಪರಿಶೀಲಿಸಿದರು.
ಒಟ್ಟು 52 ರೌಡಿಶೀಟರ್ ಮನೆಗಳಿಗೆ ಭೇಟಿ ನೀಡಿದ ಪೊಲೀಸರು. ಯಾವುದೇ ಕಾನೂನು ಬಾಹಿರ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಎಚ್ಚರಿಕೆ ನೀಡಿದರು.
Read also : Crime news | ಬ್ಯಾಂಕ್ ಸಿಬ್ಬಂದಿಯಿಂದಲೇ ಬಂಗಾರದ ಅಭರಣ ಕಳವು : ಆರೋಪಿ ಸೆರೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನಿರ್ದೇಶನದಂತೆ ಎಎಸ್ಪಿಗಳಾದ ವಿಜಯ್ ಕುಮಾರ್ ಎಂ ಸಂತೋಷ್ ಹಾಗೂ ಮಂಜುನಾಥ ಜಿ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹಾಗೂ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.