ದಾವಣಗೆರೆ (DAVANAGERE): ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಂಗಾಪುರ ಗ್ರಾಮದಲ್ಲಿ ಸೋಮವಾರ ಜಿಪಂ, ತಾಪಂ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಚನ್ನಗಿರಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ. ಇದರ ಹಿಂದೆ ಅವರ ತಂದೆ–ತಾಯಿ ಶ್ರಮ ಇರುವುದನ್ನು ಅಲ್ಲಗಳೆಯುವಂತಿಲ್ಲ. ಜೊತೆಗೆ, ಶಿಕ್ಷಕರು ಸಹ ಅವರನ್ನು ಪ್ರೇರೇಪಿಸುವ ಮೂಲಕ ಅವರ ಪ್ರತಿಭೆಯು ಅನಾವರಣಗೊಳ್ಳಲು ಕಾರಣವಾಗಿದ್ದಾರೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರμÉ್ಟೀ ಪೆÇೀಷಕರ ಪಾತ್ರವೂ ಅತಿ ಮುಖ್ಯ ಎಂದು ಹೇಳಿದರು.
ಕೆಂಗಾಪುರ ರಾಮಲಿಂಗೇಶ್ವರ ಮಠದ ಶ್ರೀ ಸದ್ಗುರು ಶ್ರೀರಾಮಲಿಂಗೇಶ್ವರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕಣಿವೆಬಿಳಚಿ ಗ್ರಾಪಂ ಅಧ್ಯಕ್ಷರಾದ ಲತಾ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ, ಕ್ಷೇತ್ರ ಸಮನ್ವಯ ಅಧಿಕಾರಿ ಡಾ.ಎಸ್. ಶಂಕರಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವಪ್ಪ, ಸಹಾಯಕ ನಿರ್ದೇಶಕ ಡಿ.ಆರ್. ಹಾಲಸಿದ್ದಪ್ಪ ಇದ್ದರು.
Read also : Davanagere | ಸರ್ಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ : ಡಿಸಿ