Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಸಲಹೆ
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಸಲಹೆ

Dinamaana Kannada News
Last updated: January 17, 2026 4:03 pm
Dinamaana Kannada News
Share
Davanagere
SHARE
ದಾವಣಗೆರೆ ಜ.17: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು ನಿಗಧಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ಸರ್ಕಾರದ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ಅರ್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
ಮತಗಟ್ಟೆಗಳ ಪುನರವಿಗಂಡಣೆ : ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳಾದ ರ್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.
ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್‍ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್‍ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕಾರ್ಯ ಸುಲಭವಾಗುತ್ತದೆ. ಹೆಸರು ಸೇರ್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ಅರ್ಹ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.
ಕ್ಷೇತ್ರದ ಮತದಾರರ ವಿವರ : ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಲಿಂಗ ಅನುಪಾತ: ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ.  ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ.
ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.
Read also : ಮಲಬದ್ಧತೆ(constipation) | ಆಯುರ್ವೇದದಲ್ಲಿದೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ : ಡಾ.ಬಿ.ಶಿವಕುಮಾರ್
ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು;   ಯುವ ಮತದಾರರು, 18-19 ವರ್ಷ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.
20-29 ವರ್ಷ: ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.
30-39 ವರ್ಷ: ಈ ವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.
ಮಧ್ಯವಯಸ್ಕರು: 40-49 ವರ್ಷ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.
50-59 ವರ್ಷ: ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.
ಹಿರಿಯ ನಾಗರಿಕರು: 60-69 ವರ್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79 ವರ್ಷ: ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.
80 ವರ್ಷ ಮೇಲ್ಪಟ್ಟವರು: ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
TAGGED:Davanagere NewsDavangere South by-electionDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagaere ಮಲಬದ್ಧತೆ(constipation) | ಆಯುರ್ವೇದದಲ್ಲಿದೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರ : ಡಾ.ಬಿ.ಶಿವಕುಮಾರ್
Next Article ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಶ್ರೀ ಬನ್ನಿ ಮಹಾಂಕಾಳಿ , ವರದಾಂಜನೇಯ ದೇವಸ್ಥಾನದಲ್ಲಿ 11ರಂದು ವಿಶೇಷ ಪೂಜೆ . ಅನ್ನ ಸಂತರ್ಪಣೆ

ದಾವಣಗೆರೆಯ ಹೊಂಡದ ಸರ್ಕಲ್ ಸಮೀಪದ ಕೊಂಡಜ್ಜಿ ರಸ್ತೆಯಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಮತ್ತು ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೆ 11ರ…

By Dinamaana Kannada News

Davanagere | ಸ್ವಚ್ಛತಾ ಹಿ ಸೇವಾ ಅಭಿಯಾನ : ಸೈಕಲ್ ಜಾಥಾಕ್ಕೆ ಮೇಯರ್ ಚಮನ್ ಸಾಬ್ ಚಾಲನೆ

ದಾವಣಗೆರೆ.ಸೆ 29 (Davanagere) :  ಕೇಂದ್ರ ಸರಕಾರದ ಸ್ವಚ್ಛ ಭಾರತ ಮಿಷನ್ ಯೋಜನೆಯ ಹತ್ತನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿಗೆ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?