ದಾವಣಗೆರೆ (Davanagere) ಏ.09: ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗಳಲ್ಲಿ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇದೇ ಏಪ್ರಿಲ್ 15 ರಿಂದ ಮೇ 3 ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿನ ಸಮಾಜ ಕಲ್ಯಾಣ ಇಲಾಖೆ ಕೊಠಡಿ ಸಂಖ್ಯೆ 37 ರಲ್ಲಿನ ಜಂಟಿ ನಿರ್ದೇಶಕರ ಕಚೇರಿಗೆ ಖುದ್ದು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅವಧಿಯ ನಂತರ ಬಂದಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಸೈಜ್ ಫೋಟೋ ಹಾಗೂ 5ನೇ ತರಗತಿ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
Read also : Davanagere | ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಅರ್ಹತೆಗಳು:
ವಿದ್ಯಾರ್ಥಿಗಳು ಕುಟುಂಬದ ವಾರ್ಷಿಕ ವರಮಾನ ರೂ.2.50ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ವಿದ್ಯಾರ್ಥಿಗಳು ಹಾಜರಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ದಾವಣಗೆರೆ ಜಿಲ್ಲೆಯವರಾಗಿರಬೇಕು. ಬೇರೆ ಜಿಲ್ಲೆಯ ಅರ್ಜಿಗಳನ್ನು ಅಂಗೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಂಬಂಧಿಸಿದ ಹತ್ತಿರದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.