Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾ.8 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್
ತಾಜಾ ಸುದ್ದಿ

ಮಾ.8 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

Dinamaana Kannada News
Last updated: February 18, 2025 1:39 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಮಾ.8ರಂದು ನಡೆಯುವ ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲಾ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿನ ವಕೀಲರ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದರು.

ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು. ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸುಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ವೈವಾಹಿಕ ಪ್ರಕರಣಗಳು ವಿವಾಹ ವಿಚ್ಛೇದನ ಹೊರತುಪಡಿಸಿ ಇತರೆ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಬಹುದೆಂದರು.

ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಕಾನೂನಿನಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್ ಅದಾಲತ್‍ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ಸು ಕೊಡಲು ಅವಕಾಶವಿದೆ ಎಂದು ತಿಳಿಸಿದರು.

1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಹೆಚ್ ಅಣ್ಣಯ್ಯನವರ್ ಮಾತನಾಡಿ, ಲೋಕ್ ಅದಾಲತ್‍ನ ಮೂಲಕ ಸಾರ್ವಜನಿಕರಿಗೆ ಶೀಘ್ರ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸುವಲ್ಲಿ ವಕೀಲರ ಪಾತ್ರ ಬಹು ಮುಖ್ಯವಾಗಿದೆ. ವಕೀಲರು ನ್ಯಾಯಾಲಯಕ್ಕೆ ಬರುವ ಕಕ್ಷಿದಾರರಿಗೆ ಅತ್ಯುತ್ತಮ ಮಾರ್ಗಗಳನ್ನು ನೀಡಬೇಕೆಂದು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಮಾತನಾಡಿ, ಲೋಕ್ ಆದಾಲತ್‍ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆಶಯದಂತೆ ಲೋಕ್ ಆದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯಾರ್ಥ ಪಡಿಸಲು ಲೋಕ್‍ಆದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ ಕುಮಾರ ಮಾತನಾಡಿ, ದಾವಣಗೆರೆ ಜಿಲ್ಲೆಯ ವಕೀಲರು ತಮ್ಮ ಬಳಿ ಬರುವ ಕಕ್ಷಿಗಾರರಿಗೆ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಯತ್ನ ಮಾಡುತ್ತಾ ಬಂದಿದ್ದು, ಈ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಪ್ರಶಂಶನೀಯ ಪತ್ರಗಳು ಕೂಡ ಬಂದಿವೆ ಎಂದು ನೆನಪಿಸಿದರು. ಸಮಾಜಕ್ಕೆ ಒಳ್ಳೆಯ ಸಂದೆಶಗಳನ್ನು ಕೊಡುವ ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವ ಲೋಕ್ ಅದಾಲತ್ ಮತ್ತು ಕಾನೂನು ಸೇವೆಗಳ ಪ್ರಕ್ರಿಯೆಗಳಲ್ಲಿ ವಕೀಲರು ಯಾವುದೇ ಹಿಂಜರಿಕೆ ಇಲ್ಲದೆ ಭಾಗವಹಿಸುತ್ತಾರೆಂದು ಎಲ್ಲಾ ವಕೀಲರ ಪರವಾಗಿ ಮಾತನಾಡಿದರು.

ಸಭೆಯಲ್ಲಿ ದಾವಣಗೆರೆ ಘಟಕದ ನ್ಯಾಯಾಧೀಶರು, ವಕೀಲ ಸಂಘದ ಎಲ್ಲಾ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ಹಾಗೂ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು.

ಕಾರ್ಯದರ್ಶಿ ಎಸ್.ಬಸವರಾಜ್ ನಿರೂಪಿಸಿದರೆ, ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಸ್ವಾಗತಿಸಿದರು.

Read akso : ಅಧಿಕಾರಿಗಳು ಮಾತು ಕೇಳ ಬೇಕು ಎಂದರೆ ಹೋರಾಟಗಳು ಅಗತ್ಯ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಧಿಕಾರಿಗಳು ಮಾತು ಕೇಳ ಬೇಕು ಎಂದರೆ ಹೋರಾಟಗಳು ಅಗತ್ಯ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
Next Article Davanagere JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ದಾವಣಗೆರೆ (Davanagere)  : ನಕಲು ಕೀ ಬಳಸಿ ಮನೆಯ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ನಂದೀಶ…

By Dinamaana Kannada News

ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು

ದಾವಣಗೆರೆ (Davanagere): ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 31 ಜೋಡಿಗಳು ನಡೆದ ಲೋಕ್…

By Dinamaana Kannada News

ಕಾಣೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ 112 ಹೊಯ್ಸಳ ಅಧಿಕಾರಿಗಳು

ಹೊನ್ನಾಳ್ಳಿ (Davanagere):ಬಸ್ ನಿಲ್ದಾಣದಿಂದ ಕಾಣೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿ ಪೋಷಕರ ಮಡಿಲಿಗೆ ಸೇರಿಸುವಲ್ಲಿ 112 ಹೊಯ್ಸಳ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಏ.24…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?