ದಾವಣಗೆರೆ : ಕ್ರಿಕೇಟ್‍ಗೆ ಮಾತ್ರ ಹೆಚ್ಚು ಆದ್ಯತೆ ನೀಡದೇ ವೈಯಕ್ತಿಕ ಕ್ರೀಡೆಗಳತ್ತ ಆಸಕ್ತಿ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೈಸಿಕಲ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾ ಕಾರ್ಯಕ್ರಮಗಳ ಉದ್ಘಾಟಿಸಿ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು.
ಕ್ರೀಡೆಯಲ್ಲಿ ಭೇದ-ಭಾವ ಇರಬಾರದು, ಸೋಲು ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳಬೇಕು. ಉತ್ತಮ ಕ್ರೀಡಾಪಟುವಾಗಬೇಕಾದರೆ, ಬರಿ ಕ್ರೀಡೆಯಲ್ಲಿ ತೊಡಗುವುದು ಅಷ್ಟೇ ಅಲ್ಲದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರು ಯಾವುದಾದರೂ ಚೇಸ್, ಕೇರಂ, ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್ ಮುಂತಾದ ಒಂದು ಕ್ರೀಡೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
Read also : ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಹರ್ಷ ಎಸ್ ಎಸ್ ಪ್ರಾಸ್ತಾವಿಕ ನುಡಿಗಳಾನ್ನಾಡಿದರು.
ಆಗಸ್ಟ್ 30 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪುರಷರಿಗೆ ಖೋ-ಖೋ, ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ಪುರುಷರಿಗೆ ಕುಸ್ತಿ ಮತ್ತು ಶ್ರೀ ನೇತಾಜಿ ಸುಭಾಷ್ ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಶಟಲ್ ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಕುಸ್ತಿ ತರಬೇತುದಾರಾದ ಡಾ. ವಿನೋದ್ ಕುಮಾರ್, ಖೋ-ಖೋ ತರಬೇತುದಾರರು ಪರಶುರಾಮ್ ಪಿ.ಎಂ, ಎಂ.ಎಸ್. ಜಮಾ ಅಹಮ್ಮದ್, ರಾಮಲಿಂಗಪ್ಪ ಹಾಗೂ ಇಲಾಖೆಯ ಎಲ್ಲಾ ತರಬೇತುದಾರರು, ಸಿಬ್ಬಂದಿಗಳು ಹಾಗೂ ಕ್ರೀಡಾಪಟುಗಳ ಭಾಗವಹಿಸಿದ್ದರು.