Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ
ತಾಜಾ ಸುದ್ದಿ

Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ

Dinamaana Kannada News
Last updated: October 2, 2024 2:01 pm
Dinamaana Kannada News
Share
davanagere
ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ
SHARE

ದಾವಣಗೆರೆ.ಅ.2.  (Davanagere):  ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ರೂ.23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ರೈಲ್ವೆ ವೇಗ ಹೆಚ್ಚಿಸಲು ಕ್ರಮ; ರೈಲ್ವೆ ಇಂಜಿನ್‍ಗಳು ಬಹುತೇಕ ಶೇ 98 ರಷ್ಟು ವಿದ್ಯುತ್ ಚಾಲಿತವಾಗಿದ್ದು ಶೇ 2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.

ಕನ್ನಡದಲ್ಲೆ ರೈಲ್ವೆ ಪರೀಕ್ಷೆ; ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

Read also : Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ, ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಹರಿಹರ ಶಾಸಕರಾದ ಬಿ.ಪಿ.ಹರೀಶ್ ಹೊಸಪೇಟೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Dinamana.comKannada NewsMinister of State for Railways and Hydropower V. Somannaಕನ್ನಡ ಸುದ್ದಿದಿನಮಾನ.ಕಾಂರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ
Share This Article
Twitter Email Copy Link Print
Previous Article davanagere Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ
Next Article Davangere University Davanagere |ದೇಶದ ಸುಸ್ಥಿರತೆಗೆ ಗಾಂಧೀ, ಶಾಸ್ತ್ರೀ ತತ್ವಗಳೇ ಪರಿಹಾರ : ಪ್ರೊ.ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | 2ನೇ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ವಿಧಾನಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂವಾದ 25 ಜೆ ಬಿ ಎಂ 2ನೇ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-25 ಅವರು ಮೌನವಾಗಿ ಬಿಡುತ್ತಾರೆ!

ಕ್ಷಯರೋಗ! …..   ಹೀಗೆ ಕೇಳಿದರೆ ಜನರಿಗೆ ಬೇಗ ಅರ್ಥವಾಗುವುದಿಲ್ಲ. ಟೀಬಿ ರೋಗ ಎನ್ನಿ , ಬಾಯ್ತುಂಬಾ ನಕ್ಕು ಪ್ರತಿಕ್ರಿಯಿಸುತ್ತಾರೆ!  ಈ…

By Dinamaana Kannada News

ಸವಾಲುಗಳ ಮೀರಿ ಜ್ಞಾನ, ಕೌಶಲ್ಯ ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ : ಎಸ್.ಆರ್. ಶಂಕಪಾಲ್  

ದಾವಣಗೆರೆ  (Davanagere):  ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಶನಿವಾರ 19 ಮತ್ತು 20ನೇ ಪದವಿ ಪ್ರದಾನ ಸಮಾರಂಭದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?