Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ
ಅಪರಾಧ ಸುದ್ದಿತಾಜಾ ಸುದ್ದಿ

ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ

Dinamaana Kannada News
Last updated: December 19, 2025 4:04 pm
Dinamaana Kannada News
Share
Davanagere crime
SHARE

ದಾವಣಗೆರೆ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2025 ನೇ ಸಾಲಿನಲ್ಲಿ ಸ್ವತ್ತು   ಕಳವು ಪ್ರಕರಣಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದ ಅಂದಾಜು ಸುಮಾರು 20.38 ಕೋಟಿ ರೂ ಮೌಲ್ಯದ ಮಾಲುಗಳನ್ನು ಶುಕ್ರವಾರ ಪೂರ್ವ ವಲಯ ಐಜಿಪಿ ಡಾ ಬಿ ಆರ್ ರವಿಕಾಂತೇಗೌಡ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದ ಆವರಣದಲ್ಲಿ ಏರ್ಪಡಿಸಿದ್ದ ಪ್ರಾಪರ್ಟಿ ರಿಟರ್ನ್ ಪೆರೇಡ್‌ನಲ್ಲಿ ವಾರಸುದಾರರಿಗೆ ವಿತರಿಸಲಾಯಿತು.

seem1 dinamaana ads

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 30-11-2025 ರವರೆಗೆ ವರದಿಯಾಗಿದ್ದ ಸ್ವತ್ತು ಕಳವು ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಕಾರ್ಯಚರಣೆ ನಡೆಸಿ ಪ್ರಕರಣಗಳನ್ನು ಬೇಧಿಸಿ ಆರೋಪಿತರಿಂದ ಪತ್ತೆ ಮಾಡಿ ವಶಪಡಿಸಿಕೊಂಡಿದ್ದ ಸ್ವತ್ತನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸ್ವತ್ತನ್ನು ಮಾಲಿಕರಿಗೆ ನೀಡಲಾಗಿದೆ ಎಂದು ಪೂರ್ವ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದರು.

ಈ ಪ್ರಾಪರ್ಟಿ ಪರೇಡ್‌ನಲ್ಲಿ 2025 ಸಾಲಿನಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಕಾರ್ಯಚರಣೆ ನಡೆಸಿ ಒಟ್ಟು 173 ಪ್ರಕರಣಗಳನ್ನು ಪತ್ತೆ ಮಾಡಿದೆ.

ಸದರಿ ಪ್ರಕರಣಗಳಲ್ಲಿನ ಅಂದಾಜು 19,64,52,459/- ರೂ ಮೌಲ್ಯದ ಸುಮಾರು 24 ಕೆಜಿ 726 ಗ್ರಾಂ ತೂಕದ ಬಂಗಾರ ಆಭರಣ ಮತ್ತು 24,35,362/- ರೂ ಮೌಲ್ಯದ 26 ಕೆಜಿ 672 ಗ್ರಾಂ ತೂಕದ ಬೆಳ್ಳಿಯ ಆಭರಣಗಳು, ಒಟ್ಟು 85,68,938/- ರೂ ನಗದು ಹಣ, 46,28,517 ರೂ ಮೌಲ್ಯದ 90 ವಿವಿಧ ಮಾದರಿ ವಾಹನಗಳು, 73,80,000 ರೂ ಮೌಲ್ಯದ 492 ವಿವಿಧ ಮಾದರಿಯ ಮೊಬೈಲ್ ಗಳು(2025 ಸಾಲಿನಲ್ಲಿ) ಹಾಗೂ 16,81,000/- ರೂ ಮೌಲ್ಯದ ಕೃಷಿ ಉಪಕರಣಗಳು ಮತ್ತು ಇತರೆ ವಸ್ತುಗಳು ಒಟ್ಟು 20,38,32,459/-ರೂ ಮೌಲ್ಯದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ ಎಂದು ಹೇಳಿದರು.

Read also : ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್

ಬಹುತೇಕವಾಗಿ ಸ್ವತ್ತು ಕಳೆದುಕೊಂಡವರಿಗೆ ಹಿಂದಿರುಗಿಸುವ ಕೆಲಸವನ್ನು ಪೊಲೀಸ ಇಲಾಖೆ ಮಾಡಿದೆ. ಕಳೆದ ವರ್ಷ ಕಳುವಾದ ಒಟ್ಟು ಮೌಲ್ಯದ ಶೇ 90 ರಷ್ಟು ವಸ್ತುಗಳನ್ನು ವಶಪಡಿಸಿಕೊಂಡು ಅಷ್ಟು ಮೌಲ್ಯದ ವಸ್ತುಗಳನ್ನು ಸಂಬಂಧಪಟ್ಟವರಿಗೆ ನೀಡಲಾಗಿದೆ. ಇದು ಪ್ರಶಂಸೆನೀಯವಾದ ಕೆಲಸ. ನಿಜವಾದ ವಾರಸುದಾರರಿಗೆ ನೀಡಿದ್ದಾರೆ. ಹೆಣ್ಣು ಮಕ್ಕಳು ಮಾಂಗಲ್ಯದ ಬಗ್ಗೆ ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ. ಅಂತಹ ಅನೇಕ ಸರಗಳ್ಳತನ ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದರು.

ಎಸ್ಪಿ ಉಮಾಪ್ರಶಾಂತ ಮಾತನಾಡಿ, ಮಹತ್ವದ ಪ್ರಕರಣಗಳನ್ನು ದಾವಣಗೆರೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ತಮ್ಮ ಸ್ವತ್ತುಗಳನ್ನು ಕಳೆದುಕೊಂಡ ನೋವಿನಲ್ಲಿದ್ದ ಮಹಿಳೆಯರು ಇಂದು ಮತ್ತೆ ಸ್ವತ್ತುಗಳನ್ನು ವಾಪಾಸ್ಸು ಪಡೆಯುವ ವೇಳೆ ಕಣ್ಣೀರಿಟ್ಟಿದ್ದಾರೆ. ನಮ್ಮ ಪೊಲೀಸರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ. ಅವರಿಗೆ ಶೀಘ್ರವೇ ಪ್ರಶಂಸನೀಯ ಪತ್ರ ನೀಡಲಾಗುವುದು ಎಂದು ಹೇಳಿದರು.

ಈ ವೇಳೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ರವರು, ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗಿಸ್, ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ಬಿ.ಎಸ್, ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಡಿಎಆರ್ ಡಿವೈಎಸ್ಪಿ ಪ್ರಕಾಶ್ ಪಿ.ಬಿ ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಅಪರಾಧ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್
Next Article Davanagere ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತುಂಗಾ ಭದ್ರಾ ನದಿ : ನದಿ ದಾಟಿ ಅಂತ್ಯಕ್ರಿಯೆ

ಹರಿಹರ : ತಾಲೂಕಿನ ಗುತ್ತೂರು ಗ್ರಾಮದಲ್ಲಿ ಸ್ಮಶಾನ ಜಲಾವೃತ್ತವಾಗಿರುವುರಿಂದ ಮೃತ ಅಂತ್ಯಕ್ರಿಯೆಗೆ ಪರದಾಡಿದ ಘಟನೆ ನಡೆದಿದ್ದು, ನದಿ ಉಕ್ಕಿ ಹರಿಯುತ್ತಿರುವ…

By Dinamaana Kannada News

Davanagere news | ಸಿಎಂ ಸ್ಥಾನಕ್ಕೆ ಸ್ಪರ್ಧೆಗೆ ಸಿದ್ದ : ಎಸ್ಸೆಸ್

ದಾವಣಗೆರೆ (Davanagere) : ದಾವಣಗೆರೆ : ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ನಾನೂ ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದು…

By Dinamaana Kannada News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಅಕ್ರಮ : ಡಿಸಿ ಕಚೇರಿ ಎದುರು ಪ್ರತಿಭಟನೆ

ದಾವಣಗೆರೆ (Davanagere): ಚನ್ನಗಿರಿ ತಾಲೂಕಿನ ನಲ್ಲೂರು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ  ಅಧಿಕಾರಿಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?