Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ವಕ್ಫ್ ತಿದ್ದುಪಡಿ ವಿರೋಧಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ
ತಾಜಾ ಸುದ್ದಿ

ದಾವಣಗೆರೆ | ವಕ್ಫ್ ತಿದ್ದುಪಡಿ ವಿರೋಧಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ

Dinamaana Kannada News
Last updated: July 5, 2025 6:38 am
Dinamaana Kannada News
Share
Protest against Waqf inf davanagere
SHARE

ದಾವಣಗೆರೆ: ಕೆಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ 2025ನ್ನು ವಿರೋಧಿಸಿ ಮತ್ತು ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಅಖಿಲ ಭಾರತೀಯ ಮುಸ್ಲಿಂ ಒಕ್ಕೂಟದ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಚಾರ್ಲಿ ಪೈಲ್ವಾನ್ ಆಟೋ ನಿಲ್ದಾಣದಿಂದ ಎಸ್ಸೆಸ್ಸೆಂ ನಗರದ ಹೊಸ ಖಬರಸ್ಥಾನ ವರೆಗೆ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಟಿ.ಅಸ್ಗರ್, ವಕ್ಫ್ ಜಮೀನು ನಮ್ಮ ಪೂರ್ವಜರು ಅಲ್ಲಾಹನನ್ನು ಸಂತೃಪ್ತ ಪಡೆಸಲು ಮತ್ತು ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನಾಗಿದ್ದು, ಯಾರಿಂದಲೋ ಕಬಳಿಸಿದ ಜಮೀನಲ್ಲ ಎಂದು ಹೇಳಿದರು.

ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲಾ ಶೋಷಿತ ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಯಾಗಿ ಗುರಿಯಾಗುತ್ತವೆ.  ನಮ್ಮದು ಹಿಂದೂ-ಮುಸ್ಲಿಂ ಹೋರಾಟವಲ್ಲ, ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರುವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ ಎಂದರು.

ಕೇಂದ್ರ ವಕ್ಫ್ ತಿದ್ದುಪಡಿ ತಂದಿರುವುದು ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಳಿಸುವ ಯತ್ನವಾಗಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸುವ ಈ ರೀತಿಯ ಕ್ರಮಗಳು ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ದವಾಗಿದೆ. ನಾವು ಇದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಈ ಕಾಯ್ದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ದಾವಣಗೆರೆಯಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

Read also : ದಾವಣಗೆರೆ | ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಪ್ರತಿಭಟನೆಯಲ್ಲಿ ನಜೀರ್ ಅಹ್ಮದ್, ತಾಹೀರ್ ಅಹ್ಮದ್,  ಮಹಮ್ಮದ್ ಅಲಿ, ಶೋಯೇಬ್,  ಸಾಜಿದ್ ಅಹ್ಮದ್, ಮಹಮ್ಮದ್ ಅಲ್ತಾಫ್, ರಜ್ವಿ ರಿಯಾಜ್ ಸಾಬ್, ಇಲು, ನೂರ್ ಅಹ್ಮದ್, ಅಹ್ಮದ್ ರಜಾ, ಯು. ಎಂ ಮನ್ಸೂರ್ ಅಲಿ, ಅತೀಕ್ ಹಜರತ್, ನಾಸೀರ್  ಸಿಲಿಂಡರ್,  ಅಜ್ಮತ್, ತಮನ್ ರಫೀಕ್, ಅರಬ್, ಅಸ್ಗರ್ ಇತರರು ಭಾಗವಹಿಸಿದ್ದರು.

TAGGED:Davanagere NewsDinamana.comKannada NewsWaqfಕನ್ನಡ ಸುದ್ದಿದಿನಮಾನ.ಕಾಂವಕ್ಫ್
Share This Article
Twitter Email Copy Link Print
Previous Article Applications invited ದಾವಣಗೆರೆ | ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ
Next Article mutual fund kannada tips ಮ್ಯೂಚುಯಲ್ ಫಂಡ್ ಅಂದರೇನು; ಹಣ ಹೂಡಿಕೆಗೆ ಇಲ್ಲಿದೆ ಚಿನ್ನದ ದಾರಿ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ

ದಾವಣಗೆರೆ  (Davanagere) : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋಬಿ. ಕೃಷ್ಣಪ್ಪ)ಯಿಂದ ರಾಜ್ಯಾದ್ಯಂತ…

By Dinamaana Kannada News

DAVANAGERE NEWS : ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davangere district )  :   ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿ (Safai Karmachari) ಗಳಿಗೆ ಶಾಶ್ವತ ಮೂಲಭೂತ ಸೌಲಭ್ಯ ಕಲ್ಪಿಸುವ…

By Dinamaana Kannada News

ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಇಂದಿನಿಂದ ಚರ್ಚೆ : ಐಡಾ ಲವ್ಲೇಸ್ ಸಾಫ್ಟ್‍ವೇರ್ ಕಂಪನಿಗೆ ಆಹ್ವಾನ

ದಾವಣಗೆರೆ.ಡಿ.4 (Davanagere) : ಸಾಫ್ಟ್‍ವೇರ್ ದಿಗ್ಗಜ ಬೆಂಗಳೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಡಿಸೆಂಬರ್ 5 ರ ಇಂದಿನಿಂದ ಆರಂಭಗೊಳ್ಳಲಿರುವ ಎರಡು ದಿನಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?