ದಾವಣಗೆರೆ (Davangere) : ಹೊಸೂರಿನಲ್ಲಿ ಹಾಡುಹಗಲೇ ವಕೀಲ ಕಣ್ಣನ ಅವರ ಕೊಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ನ್ಯಾಯಾಲಯದ ಆವರಣದಲ್ಲಿ ಧರಣಿ ನಡೆಸಿ, ಕಣ್ಣನ ಎಂಬ ವಕೀಲರ ಕೊಲೆ ಮಾಡಿದ ಪಾತಕಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇಂತಹ ಘಟನೆಗಳಿಂದ ವಕೀಲರಿಗೆ ಭಯಭೀತರಾಗಿ ಓಡಾಡುವಂತಹ ಪರಿಸ್ಥಿತಿ ಉಂಟಾಗಿದೆ. ನ್ಯಾಯಾಲಯದ ಆವರಣದಲ್ಲಿ ನಡೆಸಲಾದ ಮಾರಣಾಂತಿಕ ಹಲ್ಲೆ ಮಾಡಿದವರ ವಿರುದ್ಧ ಹಾಗೂ ಕೃತ್ಯದಲ್ಲಿ ಭಾಗಿಯಾದವರನ್ನು ಈ ಕೂಡಲೇ ಬಂಧಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಈ ಮೂಲಕ ಮನವಿ ಸಲ್ಲಿಸಿ, ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಹಾಗೂ ವಕೀಲರಿಗೆ ಸೂಕ್ತ ಭದ್ರತೆಯನ್ನು ಒದಗಿಸಿಕೊಡಬೇಕೆಂದು ಈ ಮೂಲಕ ಮನವಿ ಸಲ್ಲಿಸಲಾಯಿತು.
ಆರೋಗ್ಯಕರ ಸಮಾಜದ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ವಕೀಲರ ಮೇಲೆ ಇಂತಹ ಘಟನೆಗಳು ನಡೆಯುತ್ತಿದ್ದು, ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಎಲ್.ಹೆಚ್. ಅರುಣ್ಕುಮಾರ್, ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಬಸವರಾಜ್ ಎಸ್., ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಬಿ. ಅಜ್ಜಯ್ಯ ಆವರಗೆರೆ, ಭಾಗ್ಯಲಕ್ಷ್ಮಿ ಆರ್., ಚೌಡಪ್ಪ, ಮಧುಸೂದನ್ ಟಿ.ಹೆಚ್., ನಾಗರಾಜ್ ಎಲ್., ನೀಲಕಂಠಯ್ಯ ಕೆ.ಎಂ., ರಾಘವೇಂದ್ರ ಎಂ., ಸಂತೋಷ್ ಕುಮಾರ್ ಜಿ.ಜೆ., ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ, ಹಿರಿಯ ವಕೀಲರುಗಳಾದ ಎ.ಸಿ. ಜಗದೀಶ್ವರ್, ಎನ್. ಶಿವಲಿಂಗಪ್ಪ, ಬಿ.ಎಂ. ಹನುಮಂತಪ್ಪ, ಎಲ್.ದಯಾನಂದ್, ಗುಮ್ಮನೂರು ಮಲ್ಲಿಕಾರ್ಜುನ್, ಹೆಚ್.ದಿವಾಕರ್, ಎ.ಸಿ. ರಾಘವೇಂದ್ರ, ಸೇರಿದಂತೆ ವಕೀಲರ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
Read also : Harihara | ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ : ಲೂಸಿ ಸಾಲ್ಡಾನ