ದಾವಣಗೆರೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಹೆಣ್ಣು ಮಕ್ಕಳ ಹತ್ಯೆ ಖಂಡಿಸಿ ಹಾಗೂ ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ
ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘವು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ನಗರದ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಮಡಿವಾಳ ಸಮುದಾಯದ ಪದಾಧಿಕಾರಿಗಳು ರಾಜ್ಯದ ಮುಖ್ಯ ಮಂತ್ರಿಗಳಿಗೆ ರವಾನಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್ ಮಾತನಾಡಿ, ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ, ಹುಬ್ಬಳ್ಳಿಯ ನೇಹಾ ಹಿರೇಮಠ್, ಅಂಜಲಿ ಅಂಬಿಗರ, ಕೊಡಗುನಲ್ಲಿ ಮೀನಾ ಕೊಲೆ ಮಾಡಿರುವುದು ಸಮಾಜವನ್ನು ಬೆಚ್ಚಿ ಬೀಳಿಸಿದೆ. ಹಲ್ಲೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣಗಳು ಪದೇಪದೇ ನಡೆಯುತ್ತಿದ್ದರೂ ಸಹ ರಾಜ್ಯದ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಗೃಹ ಇಲಾಖೆ ಸೂಕ್ತ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ಇದಲ್ಲದೇ ಈ ಎಲ್ಲಾ ಪ್ರಕರಣಗಳಲ್ಲಿ ಅಮಾನವೀಯ, ವಿಕೃತವಾಗಿ ವರ್ತನೆ ಮಾಡಿರುವ ಎಲ್ಲಾ ಆರೋಪಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಹುಲಿಕಟ್ಟೆ ರಾಮಚಂದ್ರಪ್ಪ, ಎಂ.ವೈ.ಸತೀಶ್, ಜಿ.ಕಿಶೋರ್ ಕುಮಾರ್, ಆರ್.ಎನ್.ಮಾರುತಿ, ಅಂಜಿನಪ್ಪ ಪೂಜಾರ್, ಜಿ.ವಿಜಯ ಕುಮಾರ್, ಹನುಮಂತಪ್ಪ, ಕಕ್ಕರಗೊಳ್ಳ ಮಂಜುನಾಥ್, ಅಣಜಿ ಹನುಮಂತಪ್ಪ, ಐಗೂರು ಅಂಜಿನಪ್ಪ, ಅರಸೀಕೆರೆ ಬಸವರಾಜ್, ರವಿ ಚಿಕ್ಕಣ್ಣ, ಮಧುರಾ, ನಾಗಮ್ಮ, ಡೈಮಂಡ್ ಮಂಜುನಾಥ್, ಗೋಪಾಲ್, ಕೃಷ್ಣಮೂರ್ತಿ, ರವಿ, ಬಾತಿ ಶಂಕರ್, ಸುಭಾಷ್, ರಾಜಣ್ಣ, ಎಂ.ಕೆ.ಬಸವರಾಜ್ ಇತರರು ಇದ್ದರು.