ಹರಿಹರ (Harihara) : ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಅಗ್ರಹಿಸಿ ಅ.23 ರಂದು ದಾವಣಗೆರೆ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ) ತಾಲೂಕು ಘಟಕದ ಸಂಚಾಲಕ ಪಿ.ಜೆ. ಮಹಾಂತೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಅಂಬೇಡ್ಕರ್ ಸರ್ಕಲ್ ವೃತ್ತದಿಂದ ಮೆರವಣಿಗೆ ಮೂಲಕ ಎಸಿ ಕಚೇರಿಯವರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಸಂಘಟನೆಯ ತಾಲೂಕಿನ ಕಾರ್ಯಕರ್ತರು ಚಿಂತಕರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.
Read Also : Poetry | ಹೂವಿಗೆ ಹಲ್ಲುಗಳಿರುವುದಿಲ್ಲ!