Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ : ಬಿ.ವೈ. ವಿಜಯೇಂದ್ರ
ತಾಜಾ ಸುದ್ದಿ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ : ಬಿ.ವೈ. ವಿಜಯೇಂದ್ರ

Dinamaana Kannada News
Last updated: April 21, 2025 1:44 pm
Dinamaana Kannada News
Share
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ
SHARE
ದಾವಣಗೆರೆ (Davanagere): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಜನಾಕ್ರೋಶ ಯಾತ್ರೆ ಸಂಬಂಧ ಇಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಈ ಸರಕಾರ ಬಂದ ಮೇಲೆ ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಬಡಜನರು ತತ್ತರಿಸಿ ಹೋಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ; ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.
ಅಭಿವೃದ್ಧಿ ಆಗುತ್ತಿಲ್ಲ; ಒಂದು ತೊಟ್ಟು ವಿಷ ಕೊಡಿ; ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಶಾಸಕರು ಹೇಳುತ್ತಿಲ್ಲ. ಆಡಳಿತ ಪಕ್ಷದ ಹಿರಿಯ ಶಾಸಕ ರಾಜು ಕಾಗೆಯವರು ಹೇಳುತ್ತಿದ್ದಾರೆ. ಬಿ.ಆರ್.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆರ್.ವಿ.ದೇಶಪಾಂಡೆ ಅವರಂಥ ಹಿರಿಯ ಶಾಸಕರೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯ ಆಗುತ್ತಿಲ್ಲ. ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುತ್ತಿಲ್ಲ ಎಂದು ಹೇಳಿದ್ದಾಗಿ ಗಮನ ಸೆಳೆದರು.
ಸಿದ್ದರಾಮಯ್ಯನವರು ಕೇವಲ ಮುಸಲ್ಮಾನರ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದಾಗಿ ವಿವರಿಸಿದರು. ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮುದಾಯಗಳನ್ನು ಮರೆತು ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.
50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ. ಪೆಟ್ರೋಲ್ ಬೆಲೆ 3.50 ರೂ. ಏರಿಸಿದ್ದರೆ ತೆರಿಗೆ ಮೂಲಕ ಡೀಸೆಲ್ ಬೆಲೆ 5.50 ರೂ. ಹೆಚ್ಚಿಸಿದ್ದಾರೆ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ಹಾಲಿನ ಬೆಲೆ 9 ರೂ. ಜಾಸ್ತಿ ಮಾಡಿದ್ದಾರೆ. ಬೆಲೆ ಏರಿಕೆಯಿಂದ ಜನರು ಪರದಾಡುವಂತಾಗಿದೆ. ರೈತರೂ ತೊಂದರೆಗೆ ಸಿಲುಕಿದ್ದಾರೆ ಎಂದು ವಿವರಿಸಿದರು. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದ ಕಾರ್ಯಕರ್ತರು ಮತ್ತು ಮುಖಂಡರ ಪ್ರೀತಿ ವಿಶ್ವಾಸಕ್ಕೆ ಋಣಿ ಆಗಿರುವುದಾಗಿ ಇದೇ ವೇಳೆ ತಿಳಿಸಿದರು.
Read also : ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿ
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ್ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ವಿರುಪಾಕ್ಷಪ್ಪ, ಮಾಜಿ ಮುಖ್ಯ ಸಚೇತಕ ಎ.ಹೆಚ್. ಶಿವಯೋಗಿಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಜಿಲ್ಲಾಧ್ಯಕ್ಷ ಎನ್. ರಾಜಶೇಖರ, ಮಾಜಿ ಶಾಸಕ ವೈ. ಸಂಪಂಗಿ, ರಾಜೇಶ್ ಕುಮಾರ್, ಮುಖಂಡ ಮಾಡಾಳ್ ಮಲಿಕಾರ್ಜುನ್, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. 

ಬಿ.ವೈ. ವಿಜಯೇಂದ್ರ
ಬಿ.ವೈ. ವಿಜಯೇಂದ್ರ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿ
Next Article congress-protest ಗ್ಯಾರಂಟಿ ಯೋಜನೆಯ ವಿರೋಧಿ, ಜನ ದ್ವೇಷಿ ಬಿಜೆಪಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ…

By Dinamaana Kannada News

Davanagere Zilla Panchayat : ಪುಸ್ತಕದಲ್ಲಿ ಕಾಣುವ ಕೆಲಸಗಳು, ವಾಸ್ತವದಲ್ಲಿ ಕಾಣುತ್ತಿಲ್ಲ : ಶಾಸಕ ಕೆ.ಎಸ್.ಬಸವಂತಪ್ಪ ಕಿಡಿ

ದಾವಣಗೆರೆ (Davanagere)  : ಬೋರ್‌ವೆಲ್ ಕೊರೆಸಿದ ಒಬ್ಬ ರೈತನಿಗೆ ಹಳೆಯ ಟಿಸಿ, ಇನ್ನೊಬ್ಬ ರೈತನಿಗೆ ಕೊಡಬೇಕಾದ ಟಿಸಿ ಬೇರೆಯವರಿಗೆ ಮಾರಾಟ…

By Dinamaana Kannada News

DAVANAGERE : ಮಾದಿಗ ಸಮಾಜಕ್ಕೆ ಒಳ‌ಮೀಸಲಾತಿ ಜಾರಿ ಹಿನ್ನೆಲೆ ವಿಜಯೋತ್ಸವ

ದಾವಣಗೆರೆ (Davangere district ) : ಒಳ ಮೀಸಲಾತಿ ಜಾರಿ ಮಾಡುವಂತೆ ನೀಡಿರುವ ಆದೇಶ ಹಿನ್ನೆಲೆ ಮಾದಿಗ ಸಮಾಜದಿಂದ  ನಗರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dr. Guruprasad
ಆರೋಗ್ಯ

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?