ದಾವಣಗೆರೆ: ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಅಭಿವೃದ್ಧಿ ಸಂಸ್ಥೆ ವತಿಯಿಂದ
ಸಿಲ್ಕ್ ಇಂಡಿಯಾ-2024 ರೇಷ್ಮೆ ಸೀರೆಗಳ (pure silk saree’s) ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
24.5.2024 ರಿಂದ 2.6.2024 ವರೆಗೆ 10 ದಿನಗಳ ಕಾಲ ಹೋಟೆಲ್ ಪೂಜಾ ಇಂಟರ್‌ನ್ಯಾಶನಲ್ ಪ್ರದರ್ಶನ ನಡೆಯಲಿದೆ. ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಮುಂಚೂಣಿಯಲ್ಲಿದ್ದು, ಭಾರತದಲ್ಲಿ ಉತ್ಪಾದನೆಯಾಗುವ ರೇಷ್ಮೆಗೆ ರಾಷ್ಟ್ರೀಯ ಅಂತರರಾಷ್ಟ್ರೀಯ ಮತ್ತು ಮಾರುಕಟ್ಟೆಯಲ್ಲಿ ಬಹಳ ಬೇಡಿಕೆಯಿದೆ.
ಅತ್ಯುತ್ತಮ ಗುಣಮಟ್ಟದ ರೇಷ್ಮೆ ಸೀರೆಗಳು (Pure Silk sarees)
ದೇಶದಲ್ಲಿ ವಾಯುಗುಣ ಮತ್ತು ನಿಸರ್ಗಕ್ಕೆ ಅನುಗುಣವಾಗಿ 4 ವಿವಿಧ ಪ್ರಭೇದದ ರೇಷ್ಮೆಗಳಿದ್ದು ಅವುಗಳಲ್ಲಿ ತಸ್ಸರ್, ಎರಿ, ಮುಲ್‌ಬಾರಿ ಮತ್ತು ಮುಗಾ ರೇಷ್ಮೆಯ ಪ್ರಮುಖವಾಗಿದ್ದು, ಇದರಲ್ಲಿ ಟಸ್ಸರ್ ಮತ್ತು ಮುಗಾ ರೇಷ್ಮೆಯು ಒಂದು ನೈಜವಾದ ಹಾಗೂ ಉಷ್ಣವಲಯದಲ್ಲಿ ಬೆಳೆಯುವ ವನ್ಯ ರೇಷ್ಮೆ ಹಾಗೂ ಸಾವಯವ (ಆರ್ಗಾನಿಕ್) ರೇಷ್ಮೆಯಾಗಿದೆ.
ತಸ್ಸರ್ ಮತ್ತು ಮುಗಾರೇಷ್ಮೆ ಉತ್ಪಾದನೆಯಲ್ಲಿ ಅಸ್ಸಾಂ, ಬಿಹಾರ್ ಮತ್ತು ಛತ್ತೀಸ್ ಘಡ ರಾಜ್ಯಗಳು ದೇಶದಲ್ಲಿ ಪ್ರಮುಖವಾಗಿದೆ.
ರೇಷ್ಮೆ ಸೀರೆಗಳ ಮಾರಾಟ ಮೇಳ (Latest Pure silk sarees)
‘ಅಭಿವೃದ್ಧಿ ಸಂಸ್ಥೆಯನ್ನು ಭಾರತದಲ್ಲಿರುವ ಕುಶಲಕರ್ಮಿಗಳು ಮತ್ತು ನೇಕಾರರ ಶ್ರೋಯೋಭಿವೃದ್ಧಿಗಾಗಿ ಮೈಸೂರಿನಲ್ಲಿ ಸ್ಥಾಪಿಸಲಾಗಿದೆ. ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ.
ಕಾಂಚಿಪುರಂ ರೇಷ್ಮೆ ಸೀರೆ
ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ದಾವಣಗೆರೆ ಜನತೆಯ ಮುಂದೆ ಪ್ರತಿ ದಿನ ಬೆಳಿಗ್ಗೆ 10.30 ರಿಂದ ರಾತ್ರಿ 8.30 ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.
ಮೇಳದಲ್ಲಿ ತಸ್ಸರ್‌ರೇಷ್ಮೆ ಸೀರೆಗಳು, ಕ್ರೇಪ್ ಮತ್ತುಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್‌ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಾಲು ಚೆರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್ಗಳು ಮತ್ತು ಸೀರೆಗಳು, ಬಾಗಲ್‌ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್ ಉಳ್ಳ ಮಲ್ಬೆರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್‌ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು (pure silk sarees) ಪ್ರದರ್ಶನಗೊಳ್ಳಲಿದೆ.
ಹೆಚ್ಚಿನ ವಿವರಗಳಿಗೆ ದಯವಿಟ್ಟು ಸಂಪರ್ಕಿಸಿ : ದೂರವಾಣಿ: 8660714252