ರಾಜ್ಯದಲ್ಲಿ ಸೆ.3ರವರೆಗೂ ಭಾರೀ ಮಳೆ ಆಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 03ವರೆಗೂ ವ್ಯಾಪಕ ಮಳೆ ಆಗಲಿದೆ.