ದಾವಣಗೆರೆ :
7 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 20 ವರ್ಷ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಇಲ್ಲಿನ ಎಸ್ಎಂ ಕೃಷ್ಣ ನಗರದ ಬೂದಾಳ ರಸ್ತೆಯ ಅಂಜನೇಯ ಎಂಬ ವ್ಯಕ್ತಿ ಆಂಜನೇಯ ಗುಡಿಯ ಪಕ್ಕದ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿರುವು ಬಗ್ಗೆ ಬಾಲಕನ ಅಜ್ಜಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಹಿಳಾ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ತನಿಖಾಧಿಕಾರಿ ಎಂ. ಆರ್.ಚೌಬೆ ಅವರು ವಿಚಾರಣೆ ವೇಳೆ ಆರೋಪಿ ಅತ್ಯಾಚಾರ ನಡೆದಿರುವುದು ಸಾಬೀತಾದ ಹಿನ್ನಲೆಯಲ್ಲಿ ದೋಷರೋಪಣಾ ವರದಿ ಸಲ್ಲಿಸಿದ್ದರು.
ಈ ಕುರಿತು ಸಮಗ್ರ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ್. ಎನ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ 20 ವರ್ಷ ಶಿಕ್ಷೆ ಹಾಗೂ 25,000/- ರೂ ದಂಡ ವಿಧಿಸಿದೆ.
ಸಂತ್ರಸ್ಥ ಬಾಲಕನಿಗೆ ಸರ್ಕಾರದಿಂದ 6 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ನ್ಯಾಯ ಮಂಡನೆ ಮಾಡಿದ್ದರು.
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಪೊಲೀಸ್ ನಿರೀಕ್ಷಕರಾದ ಎಂ. ಆರ್.ಚೌಬೆ, ನ್ಯಾಯಾ ಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ವಿಜಯಕುಮಾರ ಎಂ. ಸಂತೋಷ್ ಮತ್ತು ಜಿ ಮಂಜುನಾಥ ರವರುಗಳು ಶ್ಲಾಘಿಸಿದ್ದಾರೆ.