ದಾವಣಗೆರೆ : ಕಾರಿಗನೂರು ಕ್ರಾಸ್ ಬಳಿ ಒಂಟಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಅಭರಣ ದೋಚಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಬಂಧಿತ ಆರೋಪಿ
ದಾವಣಗೆರೆ ತಾಲೂಕಿನ ಕಾರಿಗನೂರು ಕ್ರಾಸ್ ಗ್ರಾಮದ ವೀರಮ್ಮ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿ ತಲೆಗೆ ಹೊಡೆದು ಅಭರಣ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಉಮಾಪ್ರಶಾಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಪ್ರಕರಣದ ಆರೋಪಿ ಪತ್ತೆಗಾಗಿ ಡಿವೈಎಸ್‌ಪಿ ಬಿ.ಎಸ್ ಬಸವರಾಜ್, ಸಿಪಿಐ ರಾಘವೇಂದ್ರ ಕೆ.ಎನ್, ಪಿ.ಎಸ್.ಐ ಶ್ರೀಶೈಲ ಪಟ್ಟಣಶೆಟ್ಟಿ, ಅಜ್ಜಪ್ಪ ಎಸ್.ಬಿ ಮತ್ತು ಅವರ ಸಿಬ್ಬಂದಿಯವರನ್ನು ಒಳಗೊಂಡ ವಿಶೇಷ ತಂಡ ರಚನೆ ಮಾಡಲಾಗಿತ್ತು.
Read also : ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಸ್ಕೀಮ್ ಜಾರಿ
ತನಿಖೆ ನಡೆಸಿದ ಪೊಲೀಸರು ಗಾಯಾಳು ವೀರಮ್ಮ ರವರ ಸಂಬಂಧಿ ನವೀನ (27) ಈತನನ್ನು ವಶಕ್ಕೆಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಯಾಳು ವೀರಮ್ಮನಿಗೆ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಈ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.