ದಾವಣಗೆರೆ: ಅಪ್ರಾಪ್ತ ವಯಸ್ಸಿನ ಬಾಲಕ ವಾಹನ ಚಾಲಬೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಬೈಕ್ ಮಾಲೀಕನ ವಿರುದ್ಧ ತೀರ್ಪು ನೀಡಿ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ನಗರದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಎಸ್ಪಿ ಉಮಾ ಪ್ರಶಾಂತ್ ಸೂಚನೆಯಂತೆ ನಗರದ ಡಿವೈಎಸ್ಪಿ ಶರಣಬಸವೇಶ್ವರ ಬೀಮರಾವ್ ಮಾರ್ಗದರ್ಶನದಲ್ಲಿ ಕಳೆದ ಜೂನ್ 26 ರಂದು ಸಂಜೆ ಸಮಯದಲ್ಲಿ ದಾವಣಗೆರೆ ಟ್ರಾಫಿಕ್ ಸಿಪಿಐ ನಲವಾಗಲು ಮಂಜುನಾಥ್ ನೇತೃತ್ವದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್ಐ ನಿರ್ಮಲ ಡಿ ಎಚ್ ಹಾಗೂ ಸಿಬ್ಬಂದಿ ಆಂಜನೇಯ ಅವರೊಂದಿಗೆ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದರು.
ಈ ಸಂದರ್ಭದಲ್ಲಿ ನಗರದ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣ ಬಳಿ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕ ವಾಹನ ಚಾಲನೆ ಮಾಡುವಾಗ ಬೈಕ್ ಅನ್ನು ಜಪ್ತು ಪಡಿಸಿಕೊಂಡು ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಾಹನ ಮಾಲೀಕನ ವಿರುದ್ದ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
Read also : Davanagere | ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ
ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ ಸಿ ಹಾಗೂ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು, ಬಾಲಕನಿಗೆ ವಾಹನಕ್ಕೆ ಚಲಾಯಿಸಲು ಕೊಟ್ಟಿದ್ದಕ್ಕೆ ಮಾಲೀಕನಿಗೆ 25 ಸಾವಿರ ರೂ.ದಂಡ ವಿಧಿಸಿದ್ದಾರೆ.