ದಾವಣಗೆರೆ (Davanagere) : ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಧರಣಿ ನಿರತರ ಮನವಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರ್ಡಿಪಿಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದೀರಿ. ನಾವು ನಿಮ್ಮ ಪರವಾಗಿ ಇದ್ದೇವೆ. ನೌಕರರ ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವುದು, ಬಡ್ತಿಗೆ ಸಂಬಂಧಿಸಿದ ತೊಡಕುಗಳ ನಿವಾರಣೆ, ಕರ ವಸೂಲಿ ಮಾಡುವವರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಗಳು, ನೀರಗಂಟಿಗಳು, ಜವಾನರು ಮತ್ತು ಸ್ವಚ್ಛತಾ ಕೆಲಸದಲ್ಲಿ ತೊಡಗಿರುವವರಿಗೆ ಕಾರ್ಮಿಕ ರಾಜ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ಕಲ್ಪಿಸುವುದು, ಆರೋಗ್ಯ ವಿಮೆ ಮೊತ್ತದ ಹೆಚ್ಚಳದಂತಹ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಿರಿ. ಸರ್ಕಾರದ ಮಟ್ಟದಲ್ಲಿ ತಾವು ಕೂಡ ಒತ್ತಡ ಹಾಕಿ ನಿಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.
Read aslo : Davanagere | 5 ಲಕ್ಷಕ್ಕೆ ಶಿಶು ಮಾರಾಟ : ವೈದ್ಯೆ ಸೇರಿ ಎಂಟು ಮಂದಿ ಬಂಧನ
ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸಂಗಮೇಶ್, ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ವೀರೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.