ದಾವಣಗೆರೆ : ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರ 94ನೇ ಜನ್ಮದಿನದ ಅಂಗವಾಗಿ ಎಸ್. ಎಸ್. ಕಪ್ -2024 ಕ್ರಿಕೆಟ್ ಪಂದ್ಯಾವಳಿಗೆ ಸೋಮವಾರ ಚಾಲನೆ ನೀಡಲಾಯಿತು.
ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಈ ಪಂದ್ಯಾವಳಿಯನ್ನು ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇಂದಿನ ಯುವಕರಿಗೆ ಶಾಮನೂರು ಶಿವಶಂಕರಪ್ಪನವರು ಆದರ್ಶವಾಗುವಂತೆ ಜೀವನ ನಡೆಸುತ್ತಿದ್ದು ಅವರ ಜೀವನ ಲಕ್ಷಾಂತರ ಜನರಿಗೆ ಆದರ್ಶವಾಗಿದೆ ಎಂದು ತಿಳಿಸಿದರು.
ಶಾಮನೂರು ಶಿವಶಂಕರಪ್ಪನವರು ಜೂನ್ 16ಕ್ಕೆ 93 ವರ್ಷ ಪೂರೈಸಿ 94ನೇ ವಸಂತಕ್ಕೆ ಪಾದಾರ್ಪಣೆ ಮಾಡಲಿದ್ದು ಈ ಹಿನ್ನಲೆಯಲ್ಲಿ ಈ ಪಂದ್ಯಾವಳಿ ಹಮ್ಮಿಕೊಂಡಿರುವುದು ಶ್ಲಾಘನೀಯವೆಂದರು.
ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪಟುಗಳ ಸಂಘದ ಉಪಾಧ್ಯಕ್ಷ ಶಿವಗಂಗಾ ಶ್ರೀನಿವಾಸ್ , ಸರ್ಕಲ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್, ಜಯಪ್ರಕಾಶ್ ಗೌಡ, ಕುರುಡಿ ಗಿರೀಶ್, ಶ್ರೀನಾಥ್ , ಸುರೇಶ್, ಯತೀಶ್ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.